ನ್ಯಾಯಸ್ಥಾಪಕರು 3:10 - ಕನ್ನಡ ಸತ್ಯವೇದವು J.V. (BSI)10 ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನು ಇಸ್ರಾಯೇಲ್ಯರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದರಿಂದ ಅವನು ಅವನನ್ನು ಪೂರ್ಣವಾಗಿ ಸೋಲಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು. ಅಧ್ಯಾಯವನ್ನು ನೋಡಿ |
ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.