Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:17 - ಕನ್ನಡ ಸತ್ಯವೇದವು J.V. (BSI)

17 ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಒಪ್ಪಿಸಿದನು. ಎಗ್ಲೋನನು ಬಲು ಕೊಬ್ಬಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮೋವಾಬ್ಯರ ಅರಸ ಎಗ್ಲೋನನಿಗೆ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಏಹೂದನು ಮೋವಾಬ್ಯರ ಅರಸನಾದ ಎಗ್ಲೋನನ ಹತ್ತಿರ ಬಂದು ಅವನಿಗೆ ಕಪ್ಪದ ಹಣವನ್ನು ಕೊಟ್ಟನು. ಎಗ್ಲೋನನು ಬಹಳ ದಪ್ಪ ಮನುಷ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕಾಣಿಕೆಯನ್ನು ಮೋವಾಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ದಪ್ಪ ಮನುಷ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:17
10 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.


ನನ್ನ ಸ್ವಾಸ್ತ್ಯವನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವದರಿಂದ


ಕೊಬ್ಬಿ ಮೆರಮೆರುಗಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪಕ್ಷಹಿಡಿದು ವ್ಯಾಜ್ಯ ನಡಿಸರು, ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸರು.


ಅವರು ನಿವಿುಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.


ಕೊಬ್ಬಿನಿಂದ ಅವರ ಕಣ್ಣುಗಳು ಮೇಲೆ ಅವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.


ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು ಸೊಂಟದಲ್ಲಿ ಬೊಜ್ಜನ್ನು ಬೆಳಿಸಿಕೊಂಡಿದ್ದನು.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದೇಕೆ? ನೀನು ನನ್ನನ್ನು ಗೌರವಿಸುವದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವದು ಸರಿಯೋ?


ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರವಿುಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರನ್ನು ಒಬ್ಬನೂ ತಪ್ಪಿಸಿಕೊಳ್ಳದಂತೆ ಹತಮಾಡಿದರು.


ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಕೆಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ


ಏಹೂದನು ಕಪ್ಪವನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತುಕೊಂಡು ಬಂದ ಆಳುಗಳನ್ನು ಕಳುಹಿಸಿಬಿಟ್ಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು