ನ್ಯಾಯಸ್ಥಾಪಕರು 3:27 - ಕನ್ನಡ ಸತ್ಯವೇದವು J.V. (BSI)27 ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲ್ಯರು ಅವನ ಬಳಿಗೆ ಬಂದು ಗಟ್ಟಾ ಇಳಿದು ಅವನ ಸಂಗಡ ಹೊರಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸೆಯೀರಾ ಎಂಬಲ್ಲಿಗೆ ಬಂದು ಎಫ್ರಯಿಮ್ ಪರ್ವತಪ್ರದೇಶದಲ್ಲಿ ಕಹಳೆಯನ್ನು ಊದಿದನು. ಕೂಡಲೆ ಇಸ್ರಯೇಲರು ಅವನ ಬಳಿಗೆ ಬಂದು, ಗುಡ್ಡದಿಂದ ಇಳಿದು ಅವನ ಸಂಗಡ ಹೊರಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಸೆಯೀರಾ ಎಂಬ ಸ್ಥಳಕ್ಕೆ ಬಂದನು. ಅಲ್ಲಿ ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅವನು ತುತ್ತೂರಿಯನ್ನು ಊದಿದನು. ಇಸ್ರೇಲರು ತುತ್ತೂರಿಯ ಧ್ವನಿಯನ್ನು ಕೇಳಿ ಬೆಟ್ಟದಿಂದ ಇಳಿದು ಏಹೂದನನ್ನು ಹಿಂಬಾಲಿಸಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು. ಅಧ್ಯಾಯವನ್ನು ನೋಡಿ |
ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಅಟ್ಟಿ ಅಲ್ಲಿನವರಿಗೆ - ನೀವು ವಿುದ್ಯಾನ್ಯರಿಗೆ ವಿರೋಧವಾಗಿ ಹೊರಟು ಅವರು ಬೇತ್‍ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ದಾಟಿ ಹೋಗದಂತೆ ಅಡ್ಡಗಟ್ಟಿರಿ ಎಂದು ಹೇಳಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಯೊರ್ದನ್‍ಹೊಳೆಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.