Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:3 - ಕನ್ನಡ ಸತ್ಯವೇದವು J.V. (BSI)

3 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‍ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಐದುಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವಕಾನಾನ್ಯರು, ಸಿದೋನ್ಯರು, ಲೆಬನೋನ್ ಪರ್ವತದಲ್ಲಿ ಬಾಳ್ ಹೆರ್ಮೋನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಎಲ್ಲಾ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‌ಹೆರ್ಮೊನ್ ಬೆಟ್ಟದಿಂದ ಲೆಬೂಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಐದು ಮಂದಿ ಫಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಸೀದೋನ್ಯರೂ ಬಾಳ್ ಹೆರ್ಮೋನ್ ಬೆಟ್ಟದಿಂದ ಪ್ರಾರಂಭಿಸಿ ಹಮಾತಿನ ಪ್ರದೇಶದವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾಗಿರುವ ಹಿವ್ವಿಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:3
31 ತಿಳಿವುಗಳ ಹೋಲಿಕೆ  

ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ,


ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ ಸಾವಿರ ಸಾವಿರ ಮಂದಿಯಾಗಿಯೂ ಬರುತ್ತಿರುವಾಗ ದಾವೀದನು ತನ್ನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂದಳದಲ್ಲಿದ್ದನು.


ಆಗ ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ ಆರು ಸಾವಿರ ಅಶ್ವಬಲವನ್ನೂ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲ್ಬಲವನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ವಿುಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.


ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಪ್ರಭುಗಳ ಅಧೀನದಲ್ಲಿದ್ದ ಎಲ್ಲಾ ಗ್ರಾಮನಗರಗಳ ಸಂಖ್ಯೆಗೂ ಸರಿಯಾಗಿದ್ದವು. ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಇಂದಿನವರೆಗೂ ಇರುವ ಯೆಹೋವನ ಮಂಜೂಷವು ಇಡಲ್ಪಟ್ಟ ಆ ದೊಡ್ಡ ಕಲ್ಲೇ ಈ ಗ್ರಾಮನಗರಗಳಿಗೆ ಮೇರೆಯಾಗಿದೆ.


ಆ ಐದು ಮಂದಿ ಹೊರಟು ಲಯಿಷಿಗೆ ಬಂದು - ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ತಗ್ಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬದನ್ನು ತಿಳಿದುಕೊಂಡು


ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬದು ಅವನ ತಂದೆತಾಯಿಗಳಿಗೆ ಗೊತ್ತಿದ್ದಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ದೊರೆತನ ನಡಿಸುತ್ತಿದ್ದರು.


ಇವೇ ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ಬಿಡಿಸಿದರೂ


ಆದದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವನಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.


ಆತನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯರಾಜನಾದ ಯಾಬೀನನಿಗೆ ಮಾರಿಬಿಟ್ಟನು. ಮ್ಲೇಚ್ಫರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿಯಾಗಿದ್ದನು.


ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.


ಪೂರ್ವಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ಬುಡದಲ್ಲಿ ವಿುಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೇಕಳುಹಿಸಿದನು.


(ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಹೆಸರಿಟ್ಟುಕೊಂಡಿದ್ದಾರೆ.)


ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಅದಕ್ಕೆ ಸೇರಿದ ಪ್ರದೇಶವೆಲ್ಲಕ್ಕೂ ಪ್ರಯಾಣಮಾಡಿರಿ. ಅವು ಯಾವವಂದರೆ - ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೇಟೀಸ್ ಎಂಬ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶ ಇವುಗಳೇ.


ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು.


ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರೂ ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಇವರೂ ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ ಎಂದು ತಿಳಿಸಿದರು.


ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು; ಅವನಿಗೆ ಹಡಗುಗಳು ಸೇರುವ ರೇವು ಇರುವದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವದು.


ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ - ನೀವು ಒಂದು ವೇಳೆ ಈ ನಮ್ಮ ದೇಶದ ನಿವಾಸಿಗಳೇ ಆಗಿರಬಹುದು; ಆ ಪಕ್ಷದಲ್ಲಿ ನಾವು ನಿಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳುವದು ಹೇಗೆ ಎಂದು ಉತ್ತರಕೊಟ್ಟರು.


ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲ್ಯರೊಡನೆ ಒಪ್ಪಂದ ಮಾಡಿಕೊಳ್ಳಲಿಲ್ಲ. ಎಲ್ಲರನ್ನೂ ಯುದ್ಧದಿಂದ ವಶಮಾಡಿಕೊಳ್ಳಬೇಕಾಯಿತು.


ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಂದರೆ -


ಜನರು - ನಾವು ಪ್ರಾಯಶ್ಚಿತ್ತಾರ್ಥವಾಗಿ ಕಳುಹಿಸತಕ್ಕದ್ದೇನು ಎನ್ನಲು ಅವರು - ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧ ವ್ಯಾಧಿಯಿರುವದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ ಇಲಿಗಳನ್ನೂ ಮಾಡಿಸಬೇಕು.


ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿವಸ ಎಕ್ರೋನಿಗೆ ಹಿಂದಿರುಗಿದರು.


ಅಲ್ಲಿಂದ ತಿರುಗಿಕೊಂಡು ಚೀದೋನ್, ತೂರ್‍ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು ಇವುಗಳ ಮೇಲೆ ಯೆಹೂದ ಪ್ರಾಂತದ ದಕ್ಷಿಣ ದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಪಡುವಲಲ್ಲಿ [ತೆಂಕಣ] ಮೇರೆಯಿಂದ ಹಮಾತಿನ ದಾರಿಗೆ ಎದುರಿನ [ಕರಾವಳಿಯ] ತನಕ ದೊಡ್ಡ ಸಮುದ್ರವು ಎಲ್ಲೆಯಾಗಿರುವದು. ಇದು ಪಡುವಣ ಮೇರೆ.


ಇದಲ್ಲದೆ ಅವನು ಇಸ್ರಾಯೇಲ್ಯರಿಂದ ಸಂಹೃತರಾಗದೆ ಇಸ್ರಾಯೇಲ್ಯರಲ್ಲದವರೂ ಕಾನಾನ್‍ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು