ನ್ಯಾಯಸ್ಥಾಪಕರು 3:4 - ಕನ್ನಡ ಸತ್ಯವೇದವು J.V. (BSI)4 ತಾನು ಮೋಶೆಯ ಮೂಲಕವಾಗಿ ಇವರ ಪಿತೃಗಳಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲ್ಯರು ಕೈಕೊಂಡು ನಡೆಯುವರೋ ಇಲ್ಲವೋ ಎಂಬದನ್ನು ಪರೀಕ್ಷಿಸಿ ತಿಳುಕೊಳ್ಳುವದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತಾವು ಮೋಶೆಯ ಮೂಲಕ ಇವರ ಪೂರ್ವಜರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಯೇಲರು ಕೈಗೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕಾಗಿ ಸರ್ವೇಶ್ವರ ಅವರನ್ನು ಉಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ಇಸ್ರೇಲರನ್ನು ಪರೀಕ್ಷಿಸುವುದಕ್ಕಾಗಿ ಬೇರೆ ಜನಾಂಗದವರನ್ನು ಆ ಪ್ರದೇಶದಲ್ಲಿ ಬಿಟ್ಟಿದ್ದನು. ಯೆಹೋವನು ಮೋಶೆಯ ಮೂಲಕ ಅವರ ಪೂರ್ವಿಕರಿಗೆ ಕೊಟ್ಟ ಆಜ್ಞೆಗಳನ್ನು ಇಸ್ರೇಲರು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಆತನು ನೋಡಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ತಾವು ಮೋಶೆಯ ಮುಖಾಂತರವಾಗಿ ಇಸ್ರಾಯೇಲರ ಪಿತೃಗಳಿಗೆ ಆಜ್ಞಾಪಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೇಳುವರೋ ಇಲ್ಲವೋ ಎಂದು ಪರೀಕ್ಷಿಸುವುದಕ್ಕೆ ಯೆಹೋವ ದೇವರು ಅವರನ್ನು ಉಳಿಸಿಬಿಟ್ಟರು. ಅಧ್ಯಾಯವನ್ನು ನೋಡಿ |