Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:1 - ಕನ್ನಡ ಸತ್ಯವೇದವು J.V. (BSI)

1 ಏಹೂದನು ಮರಣಹೊಂದಿದನಂತರ ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಏಹೂದನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಏಹೂದನು ನಿಧನನಾದ ನಂತರ ಇಸ್ರಯೇಲರು ಪುನಃ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಏಹೂದನು ಮರಣಹೊಂದಿದ ಮೇಲೆ ಇಸ್ರೇಲರು ಮತ್ತೆ ಯೆಹೋವನ ವಿರೋಧವಾಗಿ ಪಾಪ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಏಹೂದನು ಮರಣಹೊಂದಿದನಂತರ ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:1
12 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸಹತ್ತಿ ಯೆಹೋವನನ್ನು ಬಿಟ್ಟೇ ಬಿಟ್ಟರು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ಏಳು ವರುಷಗಳ ಪರ್ಯಂತರ ವಿುದ್ಯಾನ್ಯರ ಕೈಗೆ ಒಪ್ಪಿಸಿದನು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿವಿುತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.


ಇಸ್ರಾಯೇಲ್ಯರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಈ ಇಸ್ರಾಯೇಲ್ಯರು ಬಾಳನ ಪ್ರತಿಮೆಗಳನ್ನು ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‍ಥ ದಾವೀದ್ ಸಮುವೇಲ್ ಎಂಬವರ ವೃತ್ತಾಂತವನ್ನೂ ಪ್ರವಾದಿಗಳ ವೃತ್ತಾಂತವನ್ನೂ ವಿವರವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.


ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು