Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:17 - ಕನ್ನಡ ಸತ್ಯವೇದವು J.V. (BSI)

17 ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲುನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳ ಗುಡಾರದ ಕಡೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹಾಚೋರಿನ ಅರಸ ಯೂಬೀನನಿಗೂ ಕೇನ್ಯನದ ಹೆಬೆರನ ಮನೆಯವರಿಗೂ ಸಮಾಧಾನ ಇದ್ದುದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಸೀಸೆರನು ಓಡಿಹೋದನು. ಅವನು ಯಾಯೇಲ ಎಂಬ ಒಬ್ಬ ಮಹಿಳೆ ವಾಸವಾಗಿದ್ದ ಗುಡಾರಕ್ಕೆ ಬಂದನು. ಯಾಯೇಲಳು ಹೆಬೆರನ ಹೆಂಡತಿ. ಹೆಬೆರನು ಕೇನ್ಯನಾಗಿದ್ದನು. ಹಾಚೋರಿನ ಅರಸನಾದ ಯಾಬೀನ ಮತ್ತು ಕೇನ್ಯನಾದ ಹೆಬೆರನ ಕುಟುಂಬಗಳ ಮಧ್ಯೆ ಒಳ್ಳೆಯ ಸಮಾಧಾನವಿದ್ದಿತು. ಅದಕ್ಕಾಗಿ ಸೀಸೆರನು ಯಾಯೇಲಳ ಗುಡಾರಕ್ಕೆ ಓಡಿಹೋಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಏಕೆಂದರೆ ಯಾಬೀನನೆಂಬ ಹಾಚೋರಿನ ಅರಸನಿಗೂ, ಕೇನ್ಯನಾದ ಹೆಬೆರನ ಮನೆಗೂ ನಡುವೆ ಶಾಂತಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:17
14 ತಿಳಿವುಗಳ ಹೋಲಿಕೆ  

ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ನುಡಿಯುತ್ತಾನೆ.


ಅವರ ಊಟವೇ ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವದು; ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ಪ್ರಭುಗಳಿಗೆ ಅಪಮಾನವನ್ನುಂಟುಮಾಡಿ ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವಾತನು


ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೇ ಆಶೀರ್ವಾದವು; ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಗೇ ಆಶೀರ್ವಾದವು.


ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತು ಹೋಯಿತು; ಪ್ರಯಾಣಿಕರು ಸೀಳುದಾರಿಹಿಡಿದು ಹೋಗುವರು.


ಬಾರಾಕನು ಅವನ ಸೈನ್ಯರಥಗಳನ್ನು ಮ್ಲೇಚ್ಫರ ಹರೋಷೆತಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲಾ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.


ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ - ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿ ಬನ್ನಿರಿ ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು.


ಆ ದಿನದಲ್ಲಿ ಶೂರರೊಳಗೆ ಧೀರನಾದವನೂ ಬೆತ್ತಲೆಯಾಗಿ ಓಡಿ ಹೋಗುವನು; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು