Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:23 - ಕನ್ನಡ ಸತ್ಯವೇದವು J.V. (BSI)

23 ಆ ದಿನದಲ್ಲಿ ದೇವರು ಕಾನಾನ್ಯರಾಜನಾದ ಯಾಬೀನನನ್ನು ಇಸ್ರಾಯೇಲ್ಯರ ಮುಂದೆ ತಗ್ಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ದಿನದಲ್ಲಿ ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ದಿನದಂದು ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಯೆಲರಿಗೆ ಶರಣಾಗತನಾಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ದಿನ ದೇವರು ಇಸ್ರೇಲರಿಗಾಗಿ ಕಾನಾನ್ಯ ರಾಜನಾದ ಯಾಬೀನನನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆಯೇ ದೇವರು ಆ ದಿವಸದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:23
10 ತಿಳಿವುಗಳ ಹೋಲಿಕೆ  

ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆ ಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.


ಅವರು ಆ ದೇಶದಲ್ಲಿ ಸೇರಿ ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದಿ.


ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು;


ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.


ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ ಅವರ ಶತ್ರುಗಳನ್ನು ಸುಲಭವಾಗಿ ಅಣಗಿಸುವೆನು.


ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ ಪರಕುಲದವರನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.


ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನ ಮಾಡಿದ್ದೀ.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.


ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು - ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ತಲೆಯಲ್ಲಿ ಗೂಟವು ಜಡಿಯಲ್ಪಟ್ಟಿತ್ತು.


ಇಸ್ರಾಯೇಲ್ಯರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು