ನ್ಯಾಯಸ್ಥಾಪಕರು 4:9 - ಕನ್ನಡ ಸತ್ಯವೇದವು J.V. (BSI)9 ಆಕೆಯು - ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲುಂಟಾಗುವ ಮಾನವು ನಿನಗಲ್ಲ. ಯೆಹೋವನು ಸೀಸೆರನನ್ನು ಒಬ್ಬ ಸ್ತ್ರೀಗೆ ಒಪ್ಪಿಸಿಕೊಡುವನು ಎಂದು ಹೇಳಿ ಎದ್ದು ಬಾರಾಕನೊಡನೆ ಕೆದೆಷಿಗೆ ಹೋದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಕೆಯು, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು” ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಕೆ, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧದಿಂದ ನಿನಗೆ ಗೌರವಗಿಟ್ಟದು; ಏಕೆಂದರೆ ಸರ್ವೇಶ್ವರ ಸೀಸೆರನನ್ನು ಒಬ್ಬ ಮಹಿಳೆಗೆ ಒಪ್ಪಿಸಿಕೊಡುವರು,” ಎಂದು ಹೇಳಿ ಬಾರಾಕನೊಡನೆ ಕೆದೆಷಿಗೆ ಹೋದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅದಕ್ಕೆ ದೆಬೋರಳು, “ನಿಸ್ಸಂದೇಹವಾಗಿ ನಾನು ನಿನ್ನೊಂದಿಗೆ ಬರುತ್ತೇನೆ. ಆದರೆ ನಿನ್ನ ಈ ಮನೋಭಾವದಿಂದಾಗಿ ಸೀಸೆರನನ್ನು ಸೋಲಿಸಿದ ಗೌರವ ನಿನಗೆ ಸಲ್ಲುವುದಿಲ್ಲ. ಒಬ್ಬ ಹೆಂಗಸು ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ” ಎಂದು ಉತ್ತರಿಸಿದಳು. ದೆಬೋರಳು ಬಾರಾಕನ ಸಂಗಡ ಕೆದೆಷ್ ನಗರಕ್ಕೆ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದಕ್ಕವಳು, “ನಾನು ನಿನ್ನ ಸಂಗಡ ಖಂಡಿತವಾಗಿ ಬರುವೆನು. ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನತೆ ನಿನ್ನದಾಗಿರುವುದಿಲ್ಲ. ಏಕೆಂದರೆ ಯೆಹೋವ ದೇವರು ಸೀಸೆರನನ್ನು ಒಬ್ಬ ಸ್ತ್ರೀಯ ಕೈಗೆ ಒಪ್ಪಿಸಿಬಿಡುವೆನು,” ಎಂದು ಹೇಳಿದಳು. ದೆಬೋರಳು ಎದ್ದು ಬಾರಾಕನ ಸಂಗಡ ಕೆದೆಷಿಗೆ ಹೋದಳು. ಅಧ್ಯಾಯವನ್ನು ನೋಡಿ |