Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:1 - ಕನ್ನಡ ಸತ್ಯವೇದವು J.V. (BSI)

1 ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಹಾಡಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ದಿನ ದೆಬೋರಳು ಮತ್ತು ಅಬೀನೋವಮನ ಮಗ ಬಾರಾಕನು ಈ ಗೀತೆಯನ್ನು ಹಾಡಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರು ಸೀಸೆರನನ್ನು ಸೋಲಿಸಿದ ದಿನ ದೆಬೋರಳು ಮತ್ತು ಅಬೀನೋವಮನ ಮಗನಾದ ಬಾರಾಕನು ಈ ಗೀತೆಯನ್ನು ಹಾಡಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ದಿವಸದಲ್ಲಿ ದೆಬೋರಳೂ, ಅಬೀನೋವಮನ ಮಗ ಬಾರಾಕನೂ ಹಾಡಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:1
20 ತಿಳಿವುಗಳ ಹೋಲಿಕೆ  

ಆಗ ಮೋಶೆಯೂ ಇಸ್ರಾಯೇಲ್ಯರೂ ಯೆಹೋವನ ಸ್ತೋತ್ರಕ್ಕಾಗಿ ಈ ಕೀರ್ತನೆಯನ್ನು ಹಾಡಿದರು - ಯೆಹೋವನ ಸ್ತೋತ್ರವನ್ನು ಗಾನ ಮಾಡೋಣ; ಆತನು ಮಹಾ ಜಯಶಾಲಿಯಾದನು; ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ಕೆಡವಿನಾಶ ಮಾಡಿದ್ದಾನೆ.


ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.


ಆಗ ಮರಿಯಳು ಹೇಳಿದ್ದೇನಂದರೆ - ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ,


ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಗೀತವನ್ನು ಹಾಡುವರು - ನಮಗೆ ಬಲವಾದ ಪಟ್ಟಣವಿದೆ. [ಯೆಹೋವನು ತನ್ನ] ರಕ್ಷಣೆಯನ್ನು ಕೋಟೆಯನ್ನಾಗಿಯೂ ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.


ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯಪ್ರಾಮಾಣಿಕತೆಗಳನ್ನು ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಗೊಳಿಸುವೆನು.


ಭೂಲೋಕದ ಸುಣ್ಣಪಾದಗಳು ಯಾವದರಲ್ಲಿ ನೆಲೆಗೊಂಡವು? ಅದರ ಮೂಲೆಗಲ್ಲನ್ನು ಹಾಕಿದವರು ಯಾರು?


ಆಮೇಲೆ ಯೆಹೂದ್ಯರೂ ಯೆರೂಸಲೇವಿುನವರೂ ಅವರ ಮುಂಗಡೆಯಲ್ಲಿ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇವಿುಗೆ ಹಿಂದಿರುಗಿದರು.


ಆಮೇಲೆ ಅವನು ಜನರ ಸಮ್ಮತಿಯಿಂದ ಯೆಹೋವನಿಗೋಸ್ಕರ ಗಾಯನಮಾಡುವದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ - ಪರಿಶುದ್ಧತ್ವವೆಂಬ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂದು ಭಜಿಸಿರಿ ಎಂಬದಾಗಿ ಆಜ್ಞಾಪಿಸಿದನು.


ಹನ್ನಳ ವಿಜ್ಞಾಪನೆ - ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ತೆರೆದಿರುವದು. ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ಆ ಕಾಲದಲ್ಲಿ ಇಸ್ರಾಯೇಲ್ಯರು ಈ ಹಾಡನ್ನು ಗಾನಮಾಡಿದರು; ಏನೆಂದರೆ - ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ.


ವಿುರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು- ಯೆಹೋವನನ್ನು ಗಾನಮಾಡಿರಿ; ಆತನು ಮಹಾಜಯಶಾಲಿಯಾದನು; ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.


ಇಸ್ರಾಯೇಲ್ಯರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.


ಮನುಷ್ಯರು ಕೀರ್ತಿಸಿರುವ ಆತನ ಕೆಲಸವನ್ನು ಹೊಗಳಲು ಮರೆಯಬೇಡ.


ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ.


ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲ್ಯರಲ್ಲಿ ನ್ಯಾಯತೀರಿಸುತ್ತಿದ್ದಳು.


ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು