Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:12 - ಕನ್ನಡ ಸತ್ಯವೇದವು J.V. (BSI)

12 ಎಚ್ಚರವಾಗು, ದೆಬೋರಳೇ, ಎಚ್ಚರವಾಗು; ಎಚ್ಚರವಾಗು, ಎಚ್ಚರವಾಗಿ ಗಾನ ಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎಚ್ಚರಗೊಳ್ಳು, ಎಚ್ಚರಗೊಳ್ಳು, ದೆಬೋರಾ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಮಾಡು ನೀ ಗುಣಗಾನ, ಬಾರಾಕನೇ, ಏಳು; ಅಬೀನೋವಮನ ಮಗನೇ, ಏಳು, ಸೆರೆಹಿಡಿದವರನು ನೀ ಸಾಗಿಸಿಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಏಳು, ಏಳು ದೆಬೋರಳೇ! ಏಳು, ಎದ್ದೇಳು, ಒಂದು ಗೀತೆಯನ್ನು ಹಾಡು! ಬಾರಾಕನೇ, ಏಳು! ಅಬೀನೋವಮನ ಮಗನೇ, ಹೋಗು; ನಿನ್ನ ಶತ್ರುಗಳನ್ನು ಸೆರೆ ಹಿಡಿದುಕೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ‘ಎಚ್ಚರವಾಗು, ಎಚ್ಚರವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗಿ ಹಾಡನ್ನು ಹಾಡು; ಬಾರಾಕನೇ, ಏಳು; ಅಬೀನೋವಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡೆಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:12
18 ತಿಳಿವುಗಳ ಹೋಲಿಕೆ  

ಆದದರಿಂದ - ಆತನು ಉನ್ನತಸ್ಥಾನಕ್ಕೆ ಏರಿದಾಗ ತಾನು ಜಯಿಸಿದ್ದ ಬಹುಜನರನ್ನು ಸೆರೆಹಿಡುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಮಾಡಿದನು ಎಂಬದಾಗಿ ಪ್ರವಾದಿಯು ಹೇಳುತ್ತಾನೆ.


ನೀನು ಜಯಿಸಿದ ಬಹು ಜನರನ್ನು ಸೆರೆಹಿಡುಕೊಂಡು ಹೋಗಿ ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ ಉನ್ನತಸ್ಥಾನಕ್ಕೆ ಏರಿದ್ದೀ. ದೇವನಾದ ಯಾಹುವೇ, ಅಲ್ಲೇ ವಾಸಿಸುವಿ.


ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಮುಂಗೊಳ್ಳುವೆನು.


ಸೈತಾನನ ಉರ್ಲಿಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವದಕ್ಕೆ ಸ್ವಸ್ಥಚಿತ್ತರಾದಾರು.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಇಂಥ ಅಮಲಿನಿಂದೆಚ್ಚತ್ತು ನೀತಿವಂತರಾಗಿರಿ, ಪಾಪವನ್ನು ಬಿಟ್ಟುಬಿಡಿರಿ. ಕೆಲವರಿಗೆ ದೇವರ ವಿಷಯದಲ್ಲಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಹುಟ್ಟಬೇಕೆಂದು ಇದನ್ನು ಹೇಳುತ್ತೇನೆ.


(ಇದಾದ ಮೇಲೆ ನಾನು ಎಚ್ಚತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.)


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚತ್ತುಕೋ, ಎಚ್ಚತ್ತುಕೋ, ಎದ್ದು ನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದು ಬಿಟ್ಟಿದ್ದೀ.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ಸೂರೆಯಾಗದಿದ್ದರೂ ಸೂರೆಮಾಡಿದಿ, ಬಾಧೆಪಡದಿದ್ದರೂ ಬಾಧಿಸಿದಿ; ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ! ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಜನಾಂಗದವರು ಅವರನ್ನು ಕರತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡುಹೆಣ್ಣಾಳುಗಳನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡಿಸುವರು.


ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಮುಂಗೊಳ್ಳುವೆನು.


ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು; ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.


ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು