Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:16 - ಕನ್ನಡ ಸತ್ಯವೇದವು J.V. (BSI)

16 ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ ಕೂತಿರುವದೇಕೆ? ಮಂದೆಗಳ ಮಧ್ಯದಲ್ಲಿ ಕೊಳಲೂದುವದನ್ನು ಕೇಳಬೇಕೆಂದಿದ್ದೀರೋ? ರೂಬೇನ್ಯರು ನೀರಿನ ಕಾಲುವೆಗಳ ಬಳಿಯಲ್ಲಿ ಮಾಡಿದ ವಿಚಾರಗಳು ಬಹು ಘನವಾದವುಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ, ಮಂದೆಗಳ ಮಧ್ಯದಲ್ಲಿ ಕೊಳಲೂದುವುದನ್ನು ಕೇಳಬೇಕೆಂದು ಅಲ್ಲಿಯೇ ಕುಳಿತಿರುವುದೇಕೆ? ರೂಬೇನ್ಯರು ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು: ರೂಬೇನ್ಯರೇ, ನೀವೇಕೆ ಕೂತಿರಿ ಕುರಿಹಟ್ಟಿಗಳಲಿ? ಮಂದೆಗಳ ಮಧ್ಯೆಯಲಿ ಕೇಳಬೇಕೆಂದೋ ಅಪಾಯದ ಸಿಳ್ಳು ಸದ್ದನು? ಹೌದು ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗಿರಲು ನೀವು ಕುರಿಯ ಹಟ್ಟಿಗಳ ಗೋಡೆಗೆ ಒರಗಿಕೊಂಡು ಕುಳಿತಿರುವುದೇಕೆ? ರೂಬೇನ್ಯರ ಶೂರ ಸೈನಿಕರು ಯುದ್ಧದ ಬಗ್ಗೆ ಬಹಳವಾಗಿ ಯೋಚಿಸಿದರು, ಆದರೆ ಕುರಿಗಳಿಗಾಗಿ ಬಾರಿಸುವ ಸಂಗೀತವನ್ನು ಕೇಳುತ್ತಾ ಮನೆಯಲ್ಲಿ ಇದ್ದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮಂದೆಗಳ ಕೂಗನ್ನು ಕೇಳಿ, ನೀನು ಕುರಿ ಹಟ್ಟಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನ್ಯರ ನಡುವೆ ಹೃದಯದ ಮಹಾ ಪರಿಶೋಧನೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:16
11 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ಕಟ್ಟಿಕೊಂಡು ತರುವಾಯ ನಿಮ್ಮ ಮಾತಿನ ಮೇರೆಗೆ ಮಾಡಿರಿ ಅಂದನು.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು;


ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.


ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತಾಡಿಕೊಳ್ಳುವೆನು ಅಂದುಕೊಂಡು ಮನಸ್ಸಿನಲ್ಲಿ ವಿಚಾರಿಸಿಕೊಂಡದ್ದೇನಂದರೆ -


ಭಯಪಡಿರಿ, ಪಾಪಮಾಡಬೇಡಿರಿ, ಮೌನವಾಗಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ. ಸೆಲಾ.


ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲ ಪ್ರಭುಗಳೂ ಇಸ್ಸಾಕಾರ್ಯರೊಡನೆ ಬಾರಾಕನೂ ಆಗವಿುಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ಸರ್ರನೆ ತಗ್ಗಿಗೆ ಬಂದರು. ರೂಬೇನ್ಯರು ನೀರಿನ ಕಾಲುವೆಗಳ ಬಳಿಯಲ್ಲಿ ಮಾಡಿದ ತೀರ್ಮಾನಗಳು ಘನವಾದವುಗಳೇ ಸರಿ.


ಇಸ್ಸಾಕಾರನು ಕುರೀಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.


ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.


ಮೋಶೆ ಅವರಿಗೆ - ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲೇ ಕೂತಿರಬೇಕೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು