Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:22 - ಕನ್ನಡ ಸತ್ಯವೇದವು J.V. (BSI)

22 ಭರಧೌಡಿನಿಂದ ಓಡುವ ಅವರ ಬಲವಾದ ಕುದುರೆಗಳ ಕಾಲುಗಳ ಪೆಟ್ಟಿನಿಂದ ನೆಲವು ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಅತಿವೇಗವಾಗಿ ಓಡುತ್ತಿದ್ದ ಅವರ ಬಲವಾದ ಕುದುರೆಗಳ ಗೊರಸುಗಳ ಪೆಟ್ಟಿನಿಂದ ನೆಲವು ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೆಲ ಕಂಪಿಸಿತು ಕುದುರೆಗಳ ಭರದೌಡಿನಿಂದ ಸುತ್ತಿಗೆಯಂತಹ ಆ ಕಾಲುಗಳ ಪೆಟ್ಟಿನಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸೀಸೆರನ ಬಲಿಷ್ಠವಾದ ಕುದುರೆಗಳು ಭರದಿಂದ ಓಡಿದವು. ಆ ಕುದುರೆಗಳ ಕಾಲುಗಳು ನೆಲಕ್ಕೆ ಅಪ್ಪಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ನೆಲವನ್ನು ಘಟ್ಟಿಸಿ ಓಡುವ ಅವನ ಬಲವಾದ ಕುದುರೆಗಳ ಮೆಟ್ಟಿನಿಂದ ಗೊರಸುಗಳು ಸೀಳಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:22
10 ತಿಳಿವುಗಳ ಹೋಲಿಕೆ  

ಚೀಯೋನ್ ನಗರಿಯೇ, ಎದ್ದು ಒಕ್ಕು; ನಾನು ನಿನ್ನ ಕೊಂಬನ್ನು ಕಬ್ಬಿಣವನ್ನಾಗಿಯೂ ನಿನ್ನ ಗೊರಸನ್ನು ತಾಮ್ರವನ್ನಾಗಿಯೂ ಮಾಡುವೆನು; ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ; ಅವುಗಳಿಂದ ಹೊಡೆದ ಕೊಳ್ಳೆಯನ್ನು ಕೇವಲ ಯೆಹೋವನದಾಗಿ ಪ್ರತ್ಯೇಕಿಸುವಿ, ಅವುಗಳ ಆಸ್ತಿಯನ್ನು ಲೋಕದ ಕರ್ತನಿಗೆ ಮೀಸಲುಮಾಡುವಿ.


ಏಕಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಕಳೆದುಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.


ಅವರ ಅಂಬುಗಳು ಮೊನೆಯಾಗಿವೆ, ಬಿಲ್ಲುಗಳು ಬಿಗಿದಿವೆ; ಕುದುರೆಗಳ ಗೊರಸೆಗಳು ಕಲ್ಲಿನಂತಿವೆ; ಚಕ್ರಗಳು ಬಿರುಗಾಳಿಯಂತೆ ರಭಸವಾಗಿವೆ;


ಜೀವರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.


ಕೆಲವರು ರಥಬಲದಲ್ಲಿ, ಕೆಲವರು ಅಶ್ವ ಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ.


ನೀನು ಕುದುರೆಗೆ ಶಕ್ತಿಯನ್ನು ಕೊಟ್ಟು ಅದರ ಕೊರಳಿಗೆ ಅದರಾಟವನ್ನು ಸುತ್ತಿಸಿದಿಯೋ?


ವೈರಿಯ ಕುದುರೆಗಳ ಬುಸುಗಾಟವು ದಾನಿನಿಂದ ಕೇಳಬರುತ್ತದೆ; ತುರಂಗಗಳ ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ; ಶತ್ರುಗಳು ಬಂದರು, ಸೀಮೆಯನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು.


ಶತ್ರುವಿನ ತುರಗಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈಯವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು;


ತೋಗರ್ಮ ವಂಶದವರು ಕುದುರೆ, ಜಾತಿಯ ಕುದುರೆ, ಹೇಸರಕತ್ತೆ ಇವುಗಳನ್ನು ನಿನಗಾಗಿ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು