ನ್ಯಾಯಸ್ಥಾಪಕರು 5:28 - ಕನ್ನಡ ಸತ್ಯವೇದವು J.V. (BSI)28 ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ಅವನ ರಥವು ಬರುವದಕ್ಕೆ ಇಷ್ಟು ಹೊತ್ತೇಕಾಯಿತು! ಅವನ ಕುದುರೆಗಳ ಕಾಲುಗಳಿಗೆ ಇಷ್ಟು ಸಾವಕಾಶವೇಕೆ ಅಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಸೀಸೆರನ ತಾಯಿ ಇಣುಕಿ ನೋಡಿದಳು ಕಿಟಕಿಯಿಂದ ಕೂಗಿದಳು ಆ ಕಿಟಕಿಯ ಜಾಲರಿಗಳಿಂದ; ‘ಇಷ್ಟು ಹೊತ್ತಾಗಬೇಕೆ ರಥ ಬರುವುದಕ್ಕೆ? ಕುದುರೆಗಳ ಕಾಲುಗಳಿಗೆ ಇಷ್ಟು ಸಾವಕಾಶವೇಕೆ?’ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಸೀಸೆರನ ತಾಯಿ ಕಿಟಿಕಿಯ ಮೂಲಕ ನೋಡಿದಳು; ಆಕೆಯು ತೆರೆಯ ಮೂಲಕ ನೋಡಿ ಕೂಗಿದಳು. ‘ಸೀಸೆರನ ರಥಾಗಮನಕ್ಕೆ ಇಷ್ಟು ತಡವೇಕೆ? ಅವನ ರಥದ ಕುದುರೆಗಳ ಧ್ವನಿ ಬರಲು ಇಷ್ಟು ತಡವೇಕೆ?’ ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿಯಿಂದ ಕೂಗಿದಳು, ‘ಅವನ ರಥವು ಬರುವುದಕ್ಕೆ ಇಷ್ಟು ತಡವಾದದ್ದೇನು? ಅವನ ರಥಗಳ ಗಾಲಿಗಳು ಹಿಂದುಳಿದಿರುವುದೇನು?’ ಅಧ್ಯಾಯವನ್ನು ನೋಡಿ |