ನ್ಯಾಯಸ್ಥಾಪಕರು 5:4 - ಕನ್ನಡ ಸತ್ಯವೇದವು J.V. (BSI)4 ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶದಿಂದ ಹನಿ ಬಿದ್ದಿತು; ಮೇಘಮಂಡಲವು ಮಳೆಗರೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಎದೋಮ್ಯರ ಪ್ರಾಂತ್ಯದಿಂದ, ಸೇಯೀರ ಗುಡ್ಡದಿಂದ ಹೇ ಸರ್ವೇಶ್ವರಾ, ನೀ ಹೊರಟು ಬರುವಾಗ ಕಂಪಿಸಿತು ಭೂಮಿ, ಹನಿಗರೆಯಿತು ಆಗಸ ಮಳೆಸುರಿಸಿತು ಮೇಘಮಂಡಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಯೆಹೋವನೇ, ನೀನು ಹಿಂದೆ ಸೆಯೀರಿನ ಪ್ರದೇಶದಿಂದ ಬಂದೆ. ನೀನು ಎದೋಮ್ಯರ ಪ್ರದೇಶದಿಂದ ನಡೆದುಕೊಂಡು ಹೋದೆ. ನೀನು ನಡೆಯುವಾಗ ಭೂಮಿ ನಡುಗಿತು; ಆಕಾಶ ಹನಿಗರೆಯಿತು. ಮೇಘಮಂಡಲವು ಮಳೆಗರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಯೆಹೋವ ದೇವರೇ, ನೀವು ಸೇಯೀರಿನಿಂದ ಹೊರಟು, ಎದೋಮಿನ ಹೊಲದಿಂದ ಮುನ್ನಡೆಯುವಾಗ, ಭೂಮಿ ನಡುಗಿತು. ಆಕಾಶವು ಸಹ ಸುರಿಸಿತು. ಮೇಘಗಳು ಸಹ ನೀರು ಸುರಿಸಿದವು. ಅಧ್ಯಾಯವನ್ನು ನೋಡಿ |