Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:6 - ಕನ್ನಡ ಸತ್ಯವೇದವು J.V. (BSI)

6 ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತು ಹೋಯಿತು; ಪ್ರಯಾಣಿಕರು ಸೀಳುದಾರಿಹಿಡಿದು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನಾತನ ಮಗ ಶಮ್ಗರನ ಕಾಲದಲ್ಲಿ, ಯಾಯೇಲನ ದಿನಗಳಲಿ ನಿಂತುಹೋಯಿತು ಸಂಚಾರ ರಾಜಮಾರ್ಗಗಳಲಿ, ನಡೆದರು ಪಯಣಿಗರು ಸೀಳುದಾರಿಗಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ಮುಖ್ಯಮಾರ್ಗಗಳು ಬರಿದಾಗಿದ್ದವು. ವ್ಯಾಪಾರಿಗಳು ಮತ್ತು ಪ್ರಯಾಣಿಕರು ಸೀಳುದಾರಿಯಿಂದ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಅನಾತನ ಮಗ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿವಸಗಳಲ್ಲಿಯೂ ಹೆದ್ದಾರಿಯ ಸಂಚಾರ ನಿಂತುಹೋಯಿತು. ಪ್ರಯಾಣಿಕರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:6
11 ತಿಳಿವುಗಳ ಹೋಲಿಕೆ  

ರಾಜಮಾರ್ಗಗಳು ಹಾಳಾಗಿವೆ, ದಾರಿಗರು ಇಲ್ಲವೇ ಇಲ್ಲ; [ಶತ್ರುವು] ಒಪ್ಪಂದವನ್ನು ಮೀರಿದ್ದಾನೆ, ಊರಿನವರನ್ನು ತಿರಸ್ಕರಿಸಿದ್ದಾನೆ, ಮನುಷ್ಯರನ್ನು ಗಣನೆಗೆ ತಾರನು.


ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಹತಮಾಡಿ ಇಸ್ರಾಯೇಲ್ಯರನ್ನು ರಕ್ಷಿಸಿದನು.


ಯಾರೂ ಮಹೋತ್ಸವಗಳಿಗೆ ಬಾರದೆ ಇರುವದರಿಂದ ಚೀಯೋನಿಗೆ ಹೋಗುವ ದಾರಿಗಳು ಬಣಬಣ ಎನ್ನುತ್ತವೆ; ಅದರ ಬಾಗಿಲುಗಳೆಲ್ಲಾ ಹಾಳುಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಯುವತಿಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕಿಸುತ್ತದೆ.


ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮನ್ನು ಸಂತಾನವಿಲ್ಲದವರನ್ನಾಗಿ ಮಾಡುವವು; ನಿಮ್ಮ ಪಶುಗಳನ್ನು ಕೊಲ್ಲುವವು; ನಿಮ್ಮನ್ನು ಸ್ವಲ್ಪ ಮಂದಿಯನ್ನಾಗಿ ಮಾಡುವವು; ನಿಮ್ಮ ದಾರಿಗಳು ಹಾಳುಬೀಳುವವು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿ ಮಾಡಿಕೊಂಡಿರುವದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು, ಹೌದು, ನಮಗೆ ಅಂತ್ಯವು ಬಂದೇ ಬಂತು.


ಯೆಹೋವನು ಡೊಂಕುದಾರಿಹಿಡಿದವರನ್ನು ಪಾತಕಿಗಳ ಗತಿಗೆ ಹೋಗಮಾಡಲಿ. ಇಸ್ರಾಯೇಲ್ಯರಿಗೆ ಶುಭವುಂಟಾಗಲಿ.


ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವದಕ್ಕೆ ಆಗುತ್ತಿರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.


ದೆಬೋರಳಾದ ನಾನು ಇಸ್ರಾಯೇಲ್ಯರಲ್ಲಿ ತಾಯಿಯಂತೆ ಎದ್ದು ಬರುವವರೆಗೆ ಇಸ್ರಾಯೇಲ್‍ಗ್ರಾಮಗಳು ಹಾಳು ಬಿದ್ದಿದ್ದವು.


ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲು ದಿಗಿಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು