Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:8 - ಕನ್ನಡ ಸತ್ಯವೇದವು J.V. (BSI)

8 ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಊರುಬಾಗಲವರೆಗೆ ಬಂದಿತ್ತು. ಇಸ್ರಾಯೇಲ್ಯರ ನಾಲ್ವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳು ಇದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆರಿಸಿಕೊಂಡಿದ್ದರು ಜನರು ಅನ್ಯ ದೇವತೆಗಳನು ಊರಬಾಗಿಲವರೆಗೆ ಬಂದಿತು ಕದನಕಾಳಗಗಳು ಇರಲಿಲ್ಲ ಗುರಾಣಿ, ಭರ್ಜಿಗಳಾವು ಓರ್ವರಲ್ಲೂ ಇಸ್ರಯೇಲರಾ ನಾಲ್ವತ್ತು ಸಾವಿರ ಸೈನಿಕರಲ್ಲೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ಹೊಸ ದೇವರುಗಳನ್ನು ಆರಿಸಿಕೊಂಡರು; ಅದಕ್ಕಾಗಿ ಅವರು ತಮ್ಮ ಪಟ್ಟಣ ದ್ವಾರಗಳಲ್ಲಿ ಯುದ್ಧ ಮಾಡಬೇಕಾಯಿತು. ಇಸ್ರೇಲರ ನಲವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಹೊಸ ದೇವರುಗಳನ್ನು ಆಯ್ದುಕೊಂಡರು. ಆಗ ಯುದ್ಧವು ಬಾಗಿಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಲವತ್ತು ಸಾವಿರ ಸೈನಿಕರಲ್ಲಿ ಗುರಾಣಿಯೂ, ಕಠಾರಿಯೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:8
8 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಅವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪಿತೃಗಳ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು; ಅವರಂತೆ ನಡೆಯಲೇ ಇಲ್ಲ.


ತಮ್ಮ ಪಿತೃಗಳನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಯೆಹೋವನನ್ನು ರೇಗಿಸಿದರು.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳ ತನಕ ಬಲವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ದೆಬೋರಳಾದ ನಾನು ಇಸ್ರಾಯೇಲ್ಯರಲ್ಲಿ ತಾಯಿಯಂತೆ ಎದ್ದು ಬರುವವರೆಗೆ ಇಸ್ರಾಯೇಲ್‍ಗ್ರಾಮಗಳು ಹಾಳು ಬಿದ್ದಿದ್ದವು.


ಸೇದುವ ಬಾವಿಗಳ ಬಳಿಯಲ್ಲಿ ಕೊಳ್ಳೆಯನ್ನು ಹಂಚಿಕೊಳ್ಳುವವರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯನ್ನು ವರ್ಣಿಸುತ್ತಾರೆ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರು ಬಾಗಲುಗಳಿಗೆ ಇಳಿದು ಬಂದರು.


ಈ ಜನರು ನನ್ನನ್ನು ತೊರೆದು ತಮಗಾಗಲಿ ತಮ್ಮ ಪಿತೃಗಳಿಗಾಗಲಿ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ ಈ ಸ್ಥಳವನ್ನು ಅನ್ಯಸ್ಥಾನವಾಗಿ ಮಾಡಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು