Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:9 - ಕನ್ನಡ ಸತ್ಯವೇದವು J.V. (BSI)

9 ನಾನು ಇಸ್ರಾಯೇಲ್ ನಾಯಕರಲ್ಲಿಯೂ ಸ್ವೇಚ್ಫೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತೇನೆ; ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಸ್ರಯೇಲಿನಾ ನಾಯಕರೊಡನೆ ಸೇರಿ ಸ್ವೇಚ್ಛೆಯಿಂದ ಸೈನ್ಯಸೇರಿದಾ ಜನರೊಡಗೂಡಿ ನಾ ನಲಿದು ಹಾಡುವೆನು, ಮಾಡಿರಿ ನೀವು ಸರ್ವೇಶ್ವರನ ಗುಣಗಾನವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನನ್ನ ಹೃದಯವು ಇಸ್ರೇಲಿನ ಸೇನಾಧಿಪತಿಗಳ ಸಂಗಡವಿದೆ. ಈ ಸೇನಾಧಿಪತಿಗಳು ಇಸ್ರೇಲಿಗಾಗಿ ಯುದ್ಧಮಾಡಲು ಸ್ವಇಚ್ಛೆಯಿಂದ ಬಂದರು. ಯೆಹೋವನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಇಸ್ರಾಯೇಲ್ ನಾಯಕರೊಂದಿಗೂ ಸ್ವೇಚ್ಛೆಯಿಂದ ಬಂದ ಜನರೊಂದಿಗೆ ನನ್ನ ಹೃದಯವಿದೆ. ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:9
11 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರಲ್ಲಿ ಸೇನಾನಾಯಕರು ಎದ್ದಿದ್ದಾರೆ; ಜನರು ಸ್ವೇಚ್ಫೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.


ಹೀಗಿರಲಾಗಿ ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಕೊಡುತ್ತೇವೆಂದು ನೀವು ಮೊದಲು ಹೇಳಿದ ಧರ್ಮದ್ರವ್ಯವನ್ನು ಸಿದ್ಧಪಡಿಸಬೇಕೆಂಬದಾಗಿ ಇವರನ್ನು ಬೇಡಿಕೊಳ್ಳುವದು ಅವಶ್ಯವೆಂದು ನನಗೆ ತೋಚಿತು. ಹೀಗೆ ಆ ಹಣವು ಸುಲಿಗೆಯಂತೆ ಬಾರದೆ ಧರ್ಮಾರ್ಥವಾಗಿಯೇ ಸಿದ್ಧವಾಗುವದು.


ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ಅವನು ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬರುವದಕ್ಕೆ ಹೊರಟಿದ್ದಾನೆ.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ಅವರು ಪೂರ್ಣಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಯೆಹೋವನಿಗೆ ಕಾಣಿಕೆ ಕೊಟ್ಟದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ತರುವಾಯ ಎರಡು ಲಕ್ಷ ಮಂದಿ ರಣವೀರರೊಡನೆ ಸ್ವೇಚ್ಫೆಯಿಂದ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯ ಮಗನಾದ ಅಮಸ್ಯ;


ಮತ್ತು ಸ್ವೇಚ್ಫೆಯಿಂದ ಯೆರೂಸಲೇವಿುನಲ್ಲಿ ವಾಸಿಸುವದಕ್ಕೆ ಮನಸ್ಸುಮಾಡಿದಂಥವರನ್ನು ಜನರು ಆಶೀರ್ವದಿಸಿದರು.


ಹಿಜ್ಕೀಯನೂ ಪ್ರಭುಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಹರಸಿದರು.


ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು