Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:1 - ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ಏಳು ವರುಷಗಳ ಪರ್ಯಂತರ ವಿುದ್ಯಾನ್ಯರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದ್ದರಿಂದ ಆತನು ಅವರನ್ನು ಏಳು ವರ್ಷಗಳ ಕಾಲ ಮಿದ್ಯಾನ್ಯರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಮತ್ತೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದ್ದರಿಂದ ಸರ್ವೇಶ್ವರ ಅವರನ್ನು ಏಳುವರ್ಷಕಾಲ ಮಿದ್ಯಾನ್ಯರ ಕೈಗೊಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರು ಯೆಹೋವನಿಗೆ ವಿರೋಧವಾಗಿ ಮತ್ತೆ ದುಷ್ಕೃತ್ಯಗಳನ್ನೇ ಮಾಡಿದರು. ಆದ್ದರಿಂದ ಮಿದ್ಯಾನ್ಯರು ಇಸ್ರೇಲರ ಮೇಲೆ ಏಳುವರ್ಷ ಪ್ರಭುತ್ವ ನಡೆಸುವಂತೆ ಯೆಹೋವನು ಆಸ್ಪದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ಆದ್ದರಿಂದ ಯೆಹೋವ ದೇವರು ಅವರನ್ನು ಏಳು ವರ್ಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:1
16 ತಿಳಿವುಗಳ ಹೋಲಿಕೆ  

ಈ ಇಸ್ರಾಯೇಲ್ಯರು ಬಾಳನ ಪ್ರತಿಮೆಗಳನ್ನು ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ವಿುದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.


ಇಗೋ, ಕೂಷಾನಿನ ಗುಡಾರಗಳು ಸಂಕಟಪಡುತ್ತಿವೆ, ವಿುದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ.


ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‍ಥ ದಾವೀದ್ ಸಮುವೇಲ್ ಎಂಬವರ ವೃತ್ತಾಂತವನ್ನೂ ಪ್ರವಾದಿಗಳ ವೃತ್ತಾಂತವನ್ನೂ ವಿವರವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.


(ಅಷ್ಟರಲ್ಲಿ ವಿುದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು.) ಅವರು ಯೋಸೇಫನನ್ನು ಗುಂಡಿಯೊಳಗಿಂದ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ರೂಪಾಯಿಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.


ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲರನ್ನೂ ನಿರ್ಮೂಲಮಾಡುವ ಹಾಗಿದೆಯಲ್ಲವೇ ಎಂದು ಹೇಳಿದರು.


ಆಗ ಗಿದ್ಯೋನನು ಅವನಿಗೆ - ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ವಿುದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ ಅನ್ನಲು


ಆದದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವನಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು