Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:11 - ಕನ್ನಡ ಸತ್ಯವೇದವು J.V. (BSI)

11 ಆಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾವೃಕ್ಷದ ಅಡಿಯಲ್ಲಿ ಕೂತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ವಿುದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷೆಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಮೇಲೆ ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರ ದೂತನು ಬಂದು ಅಬೀಯೆಜೆರನಾದ ಯೋವಾಷನಿಗೆ ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷಿಯ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:11
17 ತಿಳಿವುಗಳ ಹೋಲಿಕೆ  

ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬವರ ವಂಶದವರಿಗೆ [ಯೊರ್ದನಿನ ಈಚೆಯಲ್ಲಿ] ಸ್ವಾಸ್ತ್ಯವು ಸಿಕ್ಕಿತು.


ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‍ಥ ದಾವೀದ್ ಸಮುವೇಲ್ ಎಂಬವರ ವೃತ್ತಾಂತವನ್ನೂ ಪ್ರವಾದಿಗಳ ವೃತ್ತಾಂತವನ್ನೂ ವಿವರವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.


ಒಂದಾನೊಂದು ದಿವಸ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ - ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.


ಆಗ ಅವನು ಅವರಿಗೆ - ನೀವು ಮಾಡಿದ ಕಾರ್ಯಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದೆನು? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.


ಅವಳು ಮರಳುಕಾಡಿನಲ್ಲಿ ಶೂರಿನ ಮಾರ್ಗದ ಒರತೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು -


ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ; ಯುದ್ಧವೀರರ ಜೊತೆಯಲ್ಲಿ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ.


ಬೇತೇಲ್, ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ, ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ನಗರಗಳೂ ಅವುಗಳ ಗ್ರಾಮಗಳೂ;


ಗಿಲ್ಯಾದನ ವಂಶದವರು ಯಾರಂದರೆ - ಈಯೆಜೆರನ ವಂಶಸ್ಥರಾದ ಈಯೆಜೆರ್ಯರು. ಹೇಲೆಕನ ವಂಶಸ್ಥರಾದ ಹೇಲೆಕ್ಯರು,


ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ - ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ ಅಂದನು.


ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ - ಒಬ್ಬ ದೇವಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.


ಅವರ ನಾಯಕನಾಗಿ ಹೊರಟು ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.


ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು