Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:12 - ಕನ್ನಡ ಸತ್ಯವೇದವು J.V. (BSI)

12 ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ - ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋವ ದೇವರ ದೂತನು ಗಿದ್ಯೋನನಿಗೆ ಪ್ರತ್ಯಕ್ಷವಾಗಿ ಅವನಿಗೆ, “ಬಲಿಷ್ಠನಾದ ಪರಾಕ್ರಮಶಾಲಿಯೇ, ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:12
16 ತಿಳಿವುಗಳ ಹೋಲಿಕೆ  

ಆ ದೂತನು ಆಕೆಯ ಬಳಿಗೆ ಬಂದು - ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನು.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ ಕನಿಕರಪಟ್ಟು ನ್ಯಾಯಸ್ಥಾಪಕರನ್ನು ಎಬ್ಬಿಸಿ ಅವರ ಜೀವಮಾನವೆಲ್ಲಾ ಅವರ ಸಂಗಡ ಇದ್ದು ಅವರ ಮೂಲಕವಾಗಿ ಇಸ್ರಾಯೇಲ್ಯರನ್ನು ಶತ್ರುಗಳಿಂದ ಬಿಡಿಸಿದನು.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು.


ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು.


ಒಂದಾನೊಂದು ದಿವಸ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ - ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.


ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ಆಗ ಬೋವಜನು ಬೇತ್ಲೆಹೇವಿುನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ - ಯೆಹೋವನು ನಿಮ್ಮ ಸಂಗಡ ಇರಲಿ ಅಂದನು. ಅವರು - ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಹರಸಿದರು.


ಆಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾವೃಕ್ಷದ ಅಡಿಯಲ್ಲಿ ಕೂತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ವಿುದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷೆಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ಆಗ ಗಿದ್ಯೋನನು ಅವನಿಗೆ - ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ವಿುದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ ಅನ್ನಲು


ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದದ್ದನ್ನು ನಡಿಸು; ದೇವರು ನಿನ್ನ ಸಂಗಡ ಇದ್ದಾನೆ.


ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳೂ ರಥಗಳೂ ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವದನ್ನು ಕಂಡರೆ ಹೆದರಬಾರದು. ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ .


ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರವಿುಯಾಗಿದ್ದನು. ಅವನು ಗಿಲ್ಯಾದನಿಗೆ ಒಬ್ಬ ಸೂಳೆಯಲ್ಲಿ ಹುಟ್ಟಿದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು