Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:13 - ಕನ್ನಡ ಸತ್ಯವೇದವು J.V. (BSI)

13 ಆಗ ಗಿದ್ಯೋನನು ಅವನಿಗೆ - ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ವಿುದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಗಿದ್ಯೋನನು ಅವನಿಗೆ, “ಸ್ವಾಮೀ, ಸರ್ವೇಶ್ವರ ನನ್ನೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಭುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ,” ಎನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಗಿದ್ಯೋನನು ಅವನಿಗೆ, “ಒಡೆಯನೇ, ಕ್ಷಮಿಸಿರಿ, ಯೆಹೋವ ದೇವರು ನಮ್ಮ ಸಂಗಡ ಇದ್ದರೆ, ಇದೆಲ್ಲಾ ನಮಗೆ ಏಕೆ ಸಂಭವಿಸಿತು? ಯೆಹೋವ ದೇವರು ನಮ್ಮನ್ನು ಈಜಿಪ್ಟಿನಿಂದ ಬರಮಾಡಲಿಲ್ಲವೋ? ಎಂದು ನಮ್ಮ ಪಿತೃಗಳು ನಮಗೆ ವಿವರಿಸಿ ಹೇಳಿದಂಥ ಅದ್ಭುತಗಳು ಎಲ್ಲಿ? ಈಗ ಯೆಹೋವ ದೇವರು ನಮ್ಮನ್ನು ಕೈಬಿಟ್ಟು, ಮಿದ್ಯಾನ್ಯರ ಕೈಗೆ ನಮ್ಮನ್ನು ಒಪ್ಪಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:13
22 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ - ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿರಿ. ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟು ಬಿಡುವನು.


ದೇವರೇ, ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿನದಲ್ಲಿ ನೀನು ನಡಿಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.


ಆಕಾಶದಿಂದ ನೋಡು, ಪರಿಶುದ್ಧವೂ ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಆಗ್ರಹವೆಲ್ಲಿ, ನಿನ್ನ ಸಾಹಸಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿಹಿಡಿದಿದ್ದೀ.


ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.


ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು ದಾವೀದನಿಗೆ ವಾಗ್ದಾನಮಾಡಿ ನಡಿಸುತ್ತಿದ್ದ ಮುಂಚಿನ ಕೃಪಾಕಾರ್ಯಗಳು ಎಲ್ಲಿ?


ಆಗ ನಾನು ಅವರ ಮೇಲೆ ಬಲುಸಿಟ್ಟಾಗಿ ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು; ಆದದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು - ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆಹೋದದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿದವಲ್ಲಾ ಅಂದುಕೊಳ್ಳುವರು.


ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು - ಹೀಗಾದರೆ ನಾನು ಯಾಕೆ ಬದುಕಬೇಕು ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ಹೋದಳು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಪ್ರವಾದಿಯಾಗಲಿ ಯಾಜಕನಾಗಲಿ ಈ ಜನರಲ್ಲಿ ಯಾರಾಗಲಿ ಯೆಹೋವನು ದಯಪಾಲಿಸಿರುವ ವಾಕ್ಯಭಾರವೇನು ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು - ಯೆಹೋವನು ಇಂತೆನ್ನುತ್ತಾನೆ - ನೀವೇ ನನ್ನ ಭಾರ, ನಾನು ನಿಮ್ಮನ್ನು ಎಸೆದುಬಿಡುವೆನು.


ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನೇ ನನಗೆ ಸಹಾಯಕನಾಗಿದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದು ಬಿಡಬೇಡ.


ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು? ಎಂಬದಾಗಿ ವಿಚಾರಿಸುವರು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ಏಳು ವರುಷಗಳ ಪರ್ಯಂತರ ವಿುದ್ಯಾನ್ಯರ ಕೈಗೆ ಒಪ್ಪಿಸಿದನು.


ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ - ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ ಅಂದನು.


ಆದರೆ ಈಗ ನೀನು ಕೈಬಿಟ್ಟದ್ದರಿಂದ ಅವಮಾನಕ್ಕೆ ಒಳಗಾದೆವಲ್ಲಾ; ನಮ್ಮ ಸೈನ್ಯಗಳ ಸಂಗಡ ನೀನು ಹೊರಡಲಿಲ್ಲ.


ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ ನಮ್ಮ ಪಿತೃಗಳನ್ನೇ ನೆಲೆಗೊಳ್ಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗಂದರು - ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು