ನ್ಯಾಯಸ್ಥಾಪಕರು 6:21 - ಕನ್ನಡ ಸತ್ಯವೇದವು J.V. (BSI)21 ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅನಂತರ ಸರ್ವೇಶ್ವರನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು. ಸರ್ವೇಶ್ವರನ ದೂತನು ಅದೃಶ್ಯನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನ ದೂತನ ಕೈಯಲ್ಲಿ ಒಂದು ಕೋಲಿತ್ತು. ಯೆಹೋವನ ದೂತನು ತನ್ನ ಕೋಲಿನ ತುದಿಯಿಂದ ಮಾಂಸವನ್ನು ಮತ್ತು ರೊಟ್ಟಿಯನ್ನು ಮುಟ್ಟಿದನು. ಆಗ ಆ ಕಲ್ಲಿನಿಂದ ಬೆಂಕಿಯ ಜ್ವಾಲೆಯು ಎದ್ದಿತು! ಮಾಂಸ ಮತ್ತು ರೊಟ್ಟಿ ಸಂಪೂರ್ಣವಾಗಿ ಸುಟ್ಟುಹೋದವು! ಆಮೇಲೆ ಯೆಹೋವನ ದೂತನು ಅದೃಶ್ಯನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಯೆಹೋವ ದೇವರ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ, ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆಯಿಂದ ಎದ್ದು, ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ದಹಿಸಿಬಿಟ್ಟಿತು. ಆಗ ಯೆಹೋವ ದೇವರ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು. ಅಧ್ಯಾಯವನ್ನು ನೋಡಿ |