Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:26 - ಕನ್ನಡ ಸತ್ಯವೇದವು J.V. (BSI)

26 ಈ ಗುಡ್ಡದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಿಂದ ಒಂದು ಯಜ್ಞವೇದಿಯನ್ನು ಕಟ್ಟಿಸಿ ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಈ ಗುಡ್ದದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸು. ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ, ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಈ ಗುಡ್ಡದ ಶಿಖರದಲ್ಲಿ ಸರ್ವೇಶ್ವರನಿಗಾಗಿ ನೇಮಕವಾದ ರೀತಿಯಿಂದ ಒಂದು ಬಲಿಪೀಠವನ್ನು ಕಟ್ಟಿಸು. ನೀನು ಕಡಿದುಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆ ಹೋರಿಯನ್ನು ದಹನ ಬಲಿಯಾಗಿ ಸಮರ್ಪಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ನಿಮ್ಮ ದೇವರಾದ ಯೆಹೋವನಿಗಾಗಿ ಸರಿಯಾದ ಯಜ್ಞವೇದಿಕೆಯನ್ನು ಈ ಗುಡ್ಡದ ಶಿಖರದಲ್ಲಿ ಕಟ್ಟಿಸು. ಆಮೇಲೆ ಆ ಎರಡನೆಯ ಹೋರಿಯನ್ನು ಈ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸು; ಅಶೇರಸ್ತಂಭದ ಕಟ್ಟಿಗೆಯನ್ನು ಈ ಸರ್ವಾಂಗಹೋಮಕ್ಕೆ ಉಪಯೋಗಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಆ ಎರಡನೆಯ ಹೋರಿಯನ್ನು ತಂದು, ನೀನು ಕಡಿದುಹಾಕಿದ ಅಶೇರ ಸ್ತಂಭವನ್ನು ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:26
8 ತಿಳಿವುಗಳ ಹೋಲಿಕೆ  

ಆದರೆ ಎಲ್ಲವೂ ಮರ್ಯಾದೆಯಿಂದಲೂ ಕ್ರಮದಿಂದಲೂ ನಡೆಯಲಿ.


ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.


ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ - ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು.


[ಆದದರಿಂದ] ನೀವು ಅವರ ಬಲಿಪೀಠಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಬಿಡಬೇಕು.


ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ ಏಳು ವರುಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡುಹೋಗಿ ನಿನ್ನ ತಂದೆಯು ಕಟ್ಟಿರುವ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹ ಸ್ತಂಭವನ್ನು ಕಡಿದುಹಾಕಿ


ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.


ಬಂಡಿಯು ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಲ್ಲಲು ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಒಡೆದು ಅಗ್ನಿಮಾಡಿ ಆ ಹಸುಗಳನ್ನು ಯೆಹೋವನಿಗೋಸ್ಕರ ಆಹುತಿಕೊಟ್ಟರು.


ಆಗ ಅರೌನನು ದಾವೀದನಿಗೆ - ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ; ಇಲ್ಲಿ ಯಜ್ಞಕ್ಕೆ ಹೋರಿಗಳೂ ಸೌದೆಗೆ ಹಂತೀಕುಂಟೆ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು