Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:28 - ಕನ್ನಡ ಸತ್ಯವೇದವು J.V. (BSI)

28 ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟದ್ದನ್ನೂ ಅದರ ಸಮೀಪದಲ್ಲಿದ್ದ ವಿಗ್ರಹ ಸ್ತಂಭವು ಕಡಿಯಲ್ಪಟ್ಟದ್ದನ್ನೂ ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟಿರುವುದನ್ನೂ, ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭವು ಕಡಿಯಲ್ಪಟ್ಟಿರುವುದನ್ನೂ, ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಊರಿನ ಜನರು ಬೆಳಿಗ್ಗೆ ಎದ್ದು ಬಾಳನ ಬಲಿಪೀಠ ಕೆಡವಲಾಗಿರುವುದನ್ನೂ ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭ ಕಡಿಯಲಾಗಿರುವುದನ್ನೂ ಹೊಸದಾಗಿ ಕಟ್ಟಿದ ಬಲಿಪೀಠದ ಮೆಲೆ ಎರಡನೆಯ ಹೋರಿ ಬಲಿಯಾದದ್ದನ್ನೂ ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಗರದ ಜನರು ಮರುದಿನ ಬೆಳಿಗ್ಗೆ ಎದ್ದಾಗ ಬಾಳನ ಯಜ್ಞವೇದಿಕೆಯು ಕೆಡವಲ್ಪಟ್ಟಿರುವುದನ್ನೂ ಅಶೇರಸ್ತಂಭವು ಕಡಿದು ಹಾಕಲ್ಪಟ್ಟಿರುವುದನ್ನೂ ನೋಡಿದರು. ಅಶೇರಸ್ತಂಭವು ಬಾಳನ ಯಜ್ಞವೇದಿಕೆಯ ಪಕ್ಕದಲ್ಲಿತ್ತು. ಗಿದ್ಯೋನನು ಕಟ್ಟಿದ್ದ ಯಜ್ಞವೇದಿಕೆಯನ್ನು ಸಹ ಅವರು ನೋಡಿದರು. ಯಜ್ಞವೇದಿಕೆಯ ಮೇಲೆ ಎರಡನೆಯ ಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಿರುವುದನ್ನೂ ಅವರು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆ ಊರಿನ ಮನುಷ್ಯರು ಬೆಳಿಗ್ಗೆ ಎದ್ದಾಗ, ಬಾಳನ ಬಲಿಪೀಠವು ಕೆಡವಲಾಗಿದ್ದನ್ನು ಮತ್ತು ಅದರ ಪಕ್ಕದಲ್ಲಿದ್ದ ಅಶೇರ ಸ್ತಂಭವನ್ನು ಕಡಿಯಲಾಗಿರುವುದನ್ನು ಕಂಡರು. ಹೊಸದಾಗಿ ಕಟ್ಟಿದ ಬಲಿಪೀಠದ ಮೇಲೆ ಆ ಎರಡನೆಯ ಹೋರಿಯ ಬಲಿ ಅರ್ಪಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:28
4 ತಿಳಿವುಗಳ ಹೋಲಿಕೆ  

ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.


ಹೀಗೆ ಮಾಡಿದವರಾರು ಎಂದು ಒಬ್ಬರನ್ನೊಬ್ಬರು ವಿಚಾರಿಸುವಲ್ಲಿ ಯೋವಾಷನ ಮಗನಾದ ಗಿದ್ಯೋನನೇ ಎಂದು ಗೊತ್ತಾಗಲು


ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು. ಹೇಗಂದರೆ -


ಪೂಜಾಸ್ಥಳಗಳನ್ನು ಹಾಳುಮಾಡಿ ಕಲ್ಲುಕಂಬಗಳನ್ನು ಒಡೆದು ಅಶೇರವಿಗ್ರಹ ಸ್ತಂಭಗಳನ್ನು ಕಡಿದುಹಾಕಿದನು; ಮೋಶೆಯು ಮಾಡಿಸಿದ ತಾಮ್ರಸರ್ಪವನ್ನು ಚೂರು ಚೂರು ಮಾಡಿದನು. ಇಸ್ರಾಯೇಲ್ಯರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ನೆಹುಷ್ಟಾನ್ ಎಂಬ ಹೆಸರಿತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು