Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:3 - ಕನ್ನಡ ಸತ್ಯವೇದವು J.V. (BSI)

3 ಇವರು ಬೀಜ ಬಿತ್ತಿದ ತರುವಾಯ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇವರು ಬಿತ್ತನೆಮಾಡಿದಾಗಲೆಲ್ಲಾ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳಿದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವರು ಮಾಡುತ್ತಿದ್ದ ಬಿತ್ತನೆಯನ್ನು ಮಿದ್ಯಾನ್ಯರು, ಅಮಾಲೇಕ್ಯರು, ಹಾಗು ಪೂರ್ವದೇಶದವರು ಇವರಿಗೆ ವಿರುದ್ಧ ದಂಡೆತ್ತಿ ಬಂದು ಹಾಳು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪೂರ್ವದಿಂದ ಮಿದ್ಯಾನ್ಯರೂ ಅಮಾಲೇಕ್ಯರೂ ಯಾವಾಗಲೂ ಬಂದು ಇವರ ಬೆಳೆಗಳನ್ನು ನಾಶಪಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:3
25 ತಿಳಿವುಗಳ ಹೋಲಿಕೆ  

ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ವಿುಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಇಷ್ಟರಲ್ಲಿ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಇವನು ಅಮ್ಮೋನಿಯರನ್ನೂ ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲ್ಯರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.


ಅವನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಐನೂರು ಜೋಡಿ ಎತ್ತುಗಳೂ ಐನೂರು ಹೆಣ್ಣು ಕತ್ತೆಗಳೂ ಅನೇಕಾನೇಕ ಸೇವಕರೂ ಇದ್ದದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವಾಸ್ತ್ಯವುಳ್ಳವನಾಗಿದ್ದನು.


ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ವಿುಗಿಲಾದದ್ದು.


ಜೆಬಹ, ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳುಕೊಂಡಿದ್ದರು. ಮೂಡಣ ದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.


ಆಮೇಲೆ ಯಾಕೋಬನು ದಾರಿ ಹಿಡಿದು ಮೂಡಲ ದೇಶದವರ ಸೀಮೆಗೆ ಬಂದನು.


ನೀನು ಬಿತ್ತಿದರೂ ಕೊಯ್ಯುವದಿಲ್ಲ; ಎಣ್ಣೆಯ ಕಾಯಿಯನ್ನು ತುಳಿದರೂ ಮೈಗೆ ಎಣ್ಣೆ ಹಚ್ಚಿಕೊಳ್ಳುವದಿಲ್ಲ, ದ್ರಾಕ್ಷೆಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವದಿಲ್ಲ.


ನಾನು ಬಿತ್ತಿದ್ದನ್ನು ಮತ್ತೊಬ್ಬನು ಉಣ್ಣಲಿ, ನನ್ನ ಬೆಳೆಯು ನಿರ್ಮೂಲವಾಗಲಿ!


ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ದನಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ನಾನು ನಿಮಗೆ ಮಾಡುವದೇನಂದರೆ - ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜ ಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


ವಿುದ್ಯಾನ್ಯರ ಹಸ್ತವು ಬಲಗೊಂಡದರಿಂದ ಇಸ್ರಾಯೇಲ್ಯರು ಅವರಿಗೆ ಹೆದರಿ ಪರ್ವತಗಳಲ್ಲಿ ಕಂದರಗುಹೆದುರ್ಗಗಳನ್ನು ಮಾಡಿ ಸೇರಿಕೊಂಡರು.


ಗಾಜಾ ಪ್ರಾಂತದವರೆಗಿದ್ದ ಎಲ್ಲಾ ಭೂವಿುಯ ಹುಟ್ಟುವಳಿಯನ್ನು ಹಾಳುಮಾಡಿಬಿಟ್ಟದರಿಂದ ಇವರಿಗೆ ದವಸ ಧಾನ್ಯವಾಗಲಿ ಕುರಿದನಕತ್ತೆಗಳಾಗಲಿ ಉಳಿಯಲೇ ಇಲ್ಲ.


ಇಸ್ರಾಯೇಲ್ಯರೂ ಕೂಡಿ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಂಡು ಅವರಿಗೆ ವಿರೋಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲ್ಯರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.


ಯೆಹೋವನು ತನ್ನ ಬಲಗೈ ಮೇಲೆ, ತನ್ನ ಭುಜಬಲದ ಮೇಲೆ, ಆಣೆಯಿಟ್ಟು - ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡಲೇ ಕೊಡೆನು. ನೀನು ದುಡಿದ ದ್ರಾಕ್ಷಾರಸವನ್ನು ಅನ್ಯರು ಕುಡಿಯುವದೇ ಇಲ್ಲ;


ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯ ಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು ನಿನ್ನ ಹಾಲನ್ನು ಕುಡಿದುಬಿಡುವರು.


ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿದನು.


ಆಗ ಅಮಾಲೇಕ್ಯರು ರೆಫೀದೀವಿುನಲ್ಲಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡುವದಕ್ಕೆ ಬರಲು


ಇವೇ ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ಬಿಡಿಸಿದರೂ


ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರಿನ ಮರಗಳನ್ನೂ ತುರಾಯಿಮರಗಳನ್ನೂ ಕೊಡುತ್ತಿದ್ದನು.


ಇವು ಪಡುವಲಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವವು, ಜೊತೆಯಾಗಿ ಮೂಡಣದವರನ್ನು ಸೂರೆಗೊಳ್ಳುವವು; ಎದೋವಿುನ ಮತ್ತು ಮೋವಾಬಿನ ಮೇಲೆ ಕೈಮಾಡುವವು; ಅಮ್ಮೋನ್ಯರು ಇವುಗಳಿಗೆ ಅಧೀನರಾಗುವರು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. ಏಳಿರಿ, ಕೇದಾರಿಗೆ ಹೋಗಿ ಮೂಡಣ ದೇಶದವರನ್ನು ಹಾಳುಮಾಡಿರಿ ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.


ಕರ್ತನಾದ ಯೇಹೋವನ ಮಾತನ್ನು ಕೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - [ಅಮ್ಮೋನೇ,] ನನ್ನ ಪವಿತ್ರಾಲಯವು ಹೊಲಸಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದ್ದನ್ನು, ಯೆಹೂದವಂಶದವರು ಸೆರೆಹೋದದ್ದನ್ನು ನೀನು ನೋಡಿ ಅಹಹ ಎಂದು ಹಿಗ್ಗಿಕೊಂಡದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು