Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:32 - ಕನ್ನಡ ಸತ್ಯವೇದವು J.V. (BSI)

32 ಆ ದಿವಸದಲ್ಲಿ ಅವನು - ಬಾಳನು ತನ್ನ ಯಜ್ಞವೇದಿಯನ್ನು ಕೆಡವಿದವನೊಡನೆ ತಾನೇ ವ್ಯಾಜ್ಯವಾಡಲಿ ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳನೆಂಬ ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆ ದಿನದಲ್ಲಿ ಅವನು, “ಬಾಳನು ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟವನೊಡನೆ ತಾನೇ ವ್ಯಾಜ್ಯಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆ ದಿವಸದಲ್ಲಿ ಅವನು, “ಬಾಳನು ತನ್ನ ಬಲಿಪೀಠವನ್ನು ಕೆಡವಿದವನೊಡನೆ ತಾನೇ ವ್ಯಾಜ್ಯ ಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ‘ಯೆರುಬ್ಬಾಳ’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೋವಾಷನು, “ಗಿದ್ಯೋನನು ಬಾಳನ ಯಜ್ಞವೇದಿಕೆಯನ್ನು ಕೆಡವಿದ ಪಕ್ಷದಲ್ಲಿ ಬಾಳನು ಅವನೊಡನೆ ವಾದಿಸಲಿ” ಎಂದು ಹೇಳಿದನು. ಅಂದು ಯೋವಾಷನು ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೊಸ ಹೆಸರನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಗಿದ್ಯೋನನು ಬಾಳನ ಬಲಿಪೀಠವನ್ನು ಕೆಡವಿದ ಕಾರಣ ಅವರು ಆ ದಿವಸದಲ್ಲಿ, “ಬಾಳನೇ ವ್ಯಾಜ್ಯವಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:32
7 ತಿಳಿವುಗಳ ಹೋಲಿಕೆ  

ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದನು.


ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಣಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇನು ಎಂದು ಕೇಳಿದರೆ ನೀನು - ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಮೃತಿಹೊಂದಿದನೆಂದು ಹೇಳು ಎಂಬದಾಗಿ


ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ವಿುದ್ಯಾನ್ಯರ ದಂಡಿಳಿದಿತ್ತು.


ಕಾಡಿನಲ್ಲಿ ದ್ರಾಕ್ಷೆಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ಕಂಡೆನು; ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್‍ದೇವತೆಯ ಭಕ್ತರಾಗಿ ದೀಕ್ಷೆಗೊಂಡು ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.


ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು; ಯೆರೂಸಲೇವಿುನ ಬೀದಿಗಳೆಷ್ಟೋ ತುಚ್ಫದೇವತೆಯಾದ ಬಾಳನಿಗೆ ಹೋಮಮಾಡುವದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.


ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ - ಬಾಳನಿಗೋಸ್ಕರ ನೀವು ವ್ಯಾಜ್ಯವಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯವಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಅವನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿ ಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯವಾಡಲಿ ಎಂದನು.


ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು