Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:5 - ಕನ್ನಡ ಸತ್ಯವೇದವು J.V. (BSI)

5 ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ವಿುಡಿತೆಗಳಂತೆ ಗುಂಪುಗುಂಪಾಗಿ ಬಂದರು; ಅವರೂ ಅವರ ಒಂಟೆಗಳೂ ಅಸಂಖ್ಯ. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ಮಿಡತೆಗಳಂತೆ ಗುಂಪುಗುಂಪಾಗಿ ಬರುತ್ತಿದ್ದರು. ಅವರೂ ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಮೇತ ಮಿಡತೆಗಳಂತೆ ಗುಂಪು ಗುಂಪಾಗಿ ಬರುತ್ತಿದ್ದರು. ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪುಗಳಿಂದ ನಾಡೆಲ್ಲ ನಾಶವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮಿದ್ಯಾನ್ಯರು ಬಂದು ಈ ಪ್ರದೇಶದಲ್ಲಿ ಪಾಳೆಯ ಮಾಡಿಕೊಂಡರು. ಅವರು ತಮ್ಮ ಸಂಗಡ ತಮ್ಮ ಕುಟುಂಬದವರನ್ನೂ ಪಶುಗಳನ್ನೂ ತಂದರು. ಅವರು ಮಿಡತೆಗಳ ಗುಂಪಿನಂತೆ ಅಸಂಖ್ಯರಾಗಿದ್ದರು. ಅವರು ಮತ್ತು ಅವರ ಒಂಟೆಗಳು ಅತಿದೊಡ್ಡ ಪ್ರಮಾಣದಲ್ಲಿದ್ದು ಎಣಿಸಲು ಸಾಧ್ಯವಿರಲಿಲ್ಲ. ಇವರೆಲ್ಲರೂ ಇಸ್ರೇಲರ ಪ್ರದೇಶಕ್ಕೆ ನುಗ್ಗಿ ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ತಮ್ಮ ಪಶುಗಳ ಡೇರೆಗಳ ಸಹಿತವಾಗಿ ಮಿಡತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ, ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಅವರು ನಾಡನ್ನು ನಾಶಮಾಡುವುದಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:5
13 ತಿಳಿವುಗಳ ಹೋಲಿಕೆ  

ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ವಿುಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಜೆಬಹ, ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳುಕೊಂಡಿದ್ದರು. ಮೂಡಣ ದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.


ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.


ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು, ಅವರ ಪರದೆಗಳನ್ನೂ, ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ಸುತ್ತುಮುತ್ತಲು ದಿಗಿಲು ಎಂಬದಾಗಿ ಅವರ ಕಡೆಗೆ ಕೂಗುವರು.


ಅವರು ವಿುಡಿತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದು ಹಾಕುವರು. ಇದು ಯೆಹೋವನ ನುಡಿ.


ಉಷ್ಟ್ರಸಮೂಹವೂ ವಿುದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಆ ಸ್ವಾರ್ಥವಾಹರೆಲ್ಲಾ ಕನಕವನ್ನೂ ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.


ಅದು ಎಂದಿಗೂ ನಿವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲಿರರು; ಯಾವ ಅರಬಿಯನೂ ಗುಡಾರಹಾಕನು; ಕುರುಬರು ಮಂದೆಗಳನ್ನು ತಂಗಿಸರು.


ಯೆರೂಸಲೇವಿುನ ನಾರಿಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ ಸೊಲೊಮೋನನ ಪರದೆಗಳಂತೆ ಚಂದವುಳ್ಳವಳು.


ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಾಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.


ಆಗ ಜೆಬಹನೂ ಚಲ್ಮುನ್ನನೂ ಗಿದ್ಯೋನನಿಗೆ - ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ ಅನ್ನಲು ಅವನೆದ್ದು ಜೆಬಹ, ಚಲ್ಮುನ್ನ ಎಂಬವರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು.


ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು - ಖಂಡಿತವಾಗಿ ನಾನು ನಿನ್ನನ್ನು ವಿುಡಿತೆಗಳಷ್ಟು ಅಸಂಖ್ಯಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಆರ್ಭಟಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು