Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:6 - ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರು ವಿುದ್ಯಾನ್ಯರ ದೆಸೆಯಿಂದ ಬಲು ಕುಗ್ಗಿ ಹೋಗಿ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರು ಮಿದ್ಯಾನ್ಯರ ದೆಸೆಯಿಂದ ಬಹಳವಾಗಿ ಕುಗ್ಗಿಹೋಗಿ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಮಿದ್ಯಾನ್ಯರ ನಿಮಿತ್ತ ಇಸ್ರಯೇಲರು ಬಹಳವಾಗಿ ಕುಗ್ಗಿಹೋಗಿ ಸರ್ವೇಶ್ವರನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಸ್ರೇಲರು ಮಿದ್ಯಾನ್ಯರಿಂದಾಗಿ ತುಂಬ ಬಡವರಾಗಿ ಬಿಟ್ಟರು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದಕಾರಣ ಇಸ್ರಾಯೇಲರು ಮಿದ್ಯಾನ್ಯರಿಂದ ಬಹಳ ಬಡವರಾದರು. ಆಗ ಇಸ್ರಾಯೇಲರು ಯೆಹೋವ ದೇವರಿಗೆ ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:6
13 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು; ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.


ಇವರು ನಿನ್ನ ಬೆಳೆಯನ್ನೂ ನಿನ್ನ ಆಹಾರವನ್ನೂ ನಿನ್ನ ಗಂಡು ಹೆಣ್ಣುಮಕ್ಕಳನ್ನೂ ನಿನ್ನ ದನಕುರಿಗಳನ್ನೂ ನಿನ್ನ ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು; ನಿನ್ನ ಭರವಸದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲ್ಯರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.


ಹೀಗಿರಲು ಎದೋಮ್ಯರು - ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು ಅಂದುಕೊಂಡರೆ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅವರು ಕಟ್ಟಿದರೂ ನಾನು ಕೆಡವಿ ಹಾಕುವೆನು; ಅವರು ದುಷ್ಟ ಪ್ರಾಂತದವರೂ, ಯೆಹೋವನ ನಿತ್ಯಕೋಪಕ್ಕೆ ಈಡಾದ ಜನರೂ ಅನ್ನಿಸಿಕೊಳ್ಳುವರು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಯೆಹೋವನೇ, [ನಿನ್ನ ಜನರು] ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಆಶ್ರಯಿಸಿದರು, ನಿನ್ನ ಶಿಕ್ಷೆಗೆ ಗುರಿಯಾಗಿ ಜಪಮಾಡಿದರು.


ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ ತಿರುಗಿ ಆತನ ಪ್ರಸನ್ನತೆಯನ್ನು ಆಶಿಸಿ -


ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ಇಸ್ರಾಯೇಲ್ಯರು ವಿುದ್ಯಾನ್ಯರ ಕಾಟವನ್ನು ಸಹಿಸಲಾರದೆ ಯೆಹೋವನಿಗೆ ಮೊರೆಯಿಟ್ಟಾಗ


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳ ತನಕ ಬಲವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಆಗ ಅವರು ಯೆಹೋವನಿಗೆ - ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದೇವೆ ಎಂದು ಮೊರೆಯಿಡಲು ಆತನು ಅವರಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು