Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:8 - ಕನ್ನಡ ಸತ್ಯವೇದವು J.V. (BSI)

8 ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವದೇನಂದರೆ - ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವುದೇನೆಂದರೆ ‘ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರೆತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ಬಂದು ಇಸ್ರಯೇಲರಿಗೆ ಹೀಗೆಂದನು: “ನಿಮ್ಮ ದೇವರಾದ ಸರ್ವೇಶ್ವರ ಹೇಳುವ ಈ ಮಾತುಗಳನ್ನು ಗಮನಿಸಿರಿ: ‘ನೀವು ದಾಸತ್ವದಲ್ಲಿದ್ದಾಗ ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ಯೆಹೋವನು ಅವರ ಹತ್ತಿರಕ್ಕೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಆ ಪ್ರವಾದಿಯು ಇಸ್ರೇಲರಿಗೆ ಹೀಗೆ ಹೇಳಿದನು: “ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ನಾನು ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಅಲ್ಲಿಂದ ಹೊರಗೆ ತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಒಬ್ಬ ಪ್ರವಾದಿಯನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದರು. ಅವನು ಅವರಿಗೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, “ನೀವು ದಾಸತ್ವದಲ್ಲಿದ್ದ ನಿಮ್ಮನ್ನು ನಾನು ಈಜಿಪ್ಟಿನಿಂದ ಬರಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:8
12 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ವಿುದ್ಯಾನ್ಯರ ಕಾಟವನ್ನು ಸಹಿಸಲಾರದೆ ಯೆಹೋವನಿಗೆ ಮೊರೆಯಿಟ್ಟಾಗ


ಐಗುಪ್ತ್ಯರಿಂದ ನಿಮ್ಮನ್ನು ಬಿಡಿಸಿದ್ದಲ್ಲದೆ ಬೇರೆ ಎಲ್ಲಾ ಬಾಧಕರಿಂದಲೂ ನಿಮ್ಮನ್ನು ಬಿಡಿಸಿ ಅವರನ್ನು ನಿಮ್ಮೆದುರಿನಿಂದ ಅಟ್ಟಿಬಿಟ್ಟು ಅವರ ದೇಶವನ್ನು ನಿಮಗೆ ಕೊಟ್ಟೆನು.


ಅವರಿಗೆ - ಇಸ್ರಾಯೇಲ್ ದೇವರಾದ ಯೆಹೋವನು ಹೇಳುವದನ್ನು ಕೇಳಿರಿ; ಆತನು ನಿಮಗೆ - ನೀವು ಐಗುಪ್ತ್ಯರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ.


ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು.


ಇನ್ನು ಮೇಲೆ ನಿಮ್ಮ ಮಕ್ಕಳು - ಇದು ಯಾತಕ್ಕೆ ಎಂದು ವಿಚಾರಿಸುವಾಗ ನೀವು ಅವರಿಗೆ - ನಾವು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ಯೆಹೋವನು ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಯೆಹೋವನು ದರ್ಶಿಗಳೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲ್ಯ ಯೆಹೂದ್ಯರಿಗೆ - ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪಿತೃಗಳಿಗೂ ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ ಎಂದು ಖಂಡಿತವಾಗಿ ಹೇಳಿದಾಗ


ಆದರೆ ಆತನು ಕಷ್ಟದಲ್ಲಿದ್ದ ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು