Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:9 - ಕನ್ನಡ ಸತ್ಯವೇದವು J.V. (BSI)

9 ಐಗುಪ್ತ್ಯರಿಂದ ನಿಮ್ಮನ್ನು ಬಿಡಿಸಿದ್ದಲ್ಲದೆ ಬೇರೆ ಎಲ್ಲಾ ಬಾಧಕರಿಂದಲೂ ನಿಮ್ಮನ್ನು ಬಿಡಿಸಿ ಅವರನ್ನು ನಿಮ್ಮೆದುರಿನಿಂದ ಅಟ್ಟಿಬಿಟ್ಟು ಅವರ ದೇಶವನ್ನು ನಿಮಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಐಗುಪ್ತ್ಯರಿಂದ ನಿಮ್ಮನ್ನು ಬಿಡಿಸಿದ್ದಲ್ಲದೆ ಬೇರೆ ಎಲ್ಲಾ ಬಾಧಕರಿಂದಲೂ ನಿಮ್ಮನ್ನು ಬಿಡಿಸಿ, ಅವರನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ನಿಮಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಜಿಪ್ಟಿನವರಿಂದ ನಿಮ್ಮನ್ನು ಬಿಡಿಸಿದೆನಲ್ಲದೆ ಬೇರೆ ಎಲ್ಲಾ ಶೋಷಕರಿಂದ ನಿಮ್ಮನ್ನು ಪಾರುಮಾಡಿ, ನಿಮ್ಮ ಕಣ್ಮುಂದೆಯೇ ಅವರನ್ನು ಅಟ್ಟಿಬಿಟ್ಟು, ಅವರ ನಾಡನ್ನು ನಿಮಗೆ ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ನಿಮ್ಮನ್ನು ಬಲಶಾಲಿಗಳಾದ ಈಜಿಪ್ಟಿನ ಜನರಿಂದ ರಕ್ಷಿಸಿದೆ. ತರುವಾಯ ಕಾನಾನ್ಯರು ನಿಮ್ಮನ್ನು ಪೀಡಿಸಿದರು. ಆಗ ಮತ್ತೊಮ್ಮೆ ನಾನು ನಿಮ್ಮನ್ನು ರಕ್ಷಿಸಿದೆ. ನಾನು ಅವರನ್ನು ಅವರ ಪ್ರದೇಶದಿಂದ ಓಡಿಸಿ ಅದನ್ನು ನಿಮಗೆ ಕೊಟ್ಟೆ’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮನ್ನು ಈಜಿಪ್ಟಿನವರ ಕೈಯಿಂದ ತಪ್ಪಿಸಿ, ಅವರನ್ನು ನಿಮ್ಮ ಮುಂದೆ ಹೊರಗೆ ಹಾಕಿ, ಅವರ ದೇಶವನ್ನು ನಿಮಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:9
7 ತಿಳಿವುಗಳ ಹೋಲಿಕೆ  

ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವದೇನಂದರೆ - ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರತಂದೆನು.


ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.


ಅವರಿಗೆ - ಇಸ್ರಾಯೇಲ್ ದೇವರಾದ ಯೆಹೋವನು ಹೇಳುವದನ್ನು ಕೇಳಿರಿ; ಆತನು ನಿಮಗೆ - ನೀವು ಐಗುಪ್ತ್ಯರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ.


ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು; ಆತನ ಕೃಪೆಯು ಶಾಶ್ವತವಾದದ್ದು.


ನಾನು ನಿನ್ನ ಮುಂದುಗಡೆಯಲ್ಲಿ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸುವೆನು.


ತನ್ನ ಪ್ರಜೆಯು ಉಲ್ಲಾಸದಿಂದಲೂ ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು