Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:11 - ಕನ್ನಡ ಸತ್ಯವೇದವು J.V. (BSI)

11 ಆಗ ಅವರ ಮೇಲೆ ಬೀಳುವದಕ್ಕೆ ನಿನಗೆ ಧೈರ್ಯ ಬರುವದು ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯಬರುವುದು” ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯ ಬರುವುದು,” ಎಂದರು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರು ಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮಿದ್ಯಾನ್ಯರ ಶಿಬಿರದ ಒಳಗಡೆ ಹೋಗಿ ಅವರ ಮಾತುಗಳನ್ನು ಕೇಳಿಸಿಕೋ. ಆಗ ನೀನು ಅವರ ಮೇಲೆ ಧಾಳಿಮಾಡುವುದಕ್ಕೆ ಹೆದರುವುದಿಲ್ಲ” ಎಂದನು. ಗಿದ್ಯೋನನು ಮತ್ತು ಅವನ ಸೇವಕನಾದ ಪುರನು ಇಬ್ಬರೂ ಶತ್ರುಗಳ ಪಾಳೆಯದ ಗಡಿಯವರೆಗೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಮಾತನಾಡುವುದನ್ನು ಕೇಳು. ತರುವಾಯ ಪಾಳೆಯಲ್ಲಿ ಇಳಿದು ಹೋಗುವುದಕ್ಕೆ ನಿನ್ನ ಕೈಗಳು ಬಲಗೊಳ್ಳುವುವು,” ಎಂದರು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ಪಾಳೆಯ ಹೊರಗಿರುವ ಸೈನಿಕರ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:11
15 ತಿಳಿವುಗಳ ಹೋಲಿಕೆ  

ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.


ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ಇದಲ್ಲದೆ ಇಸ್ರಾಯೇಲ್‍ದೇವರ ಆಲಯವನ್ನು ಕಟ್ಟುವದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯ ಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.


ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ ದಾವೀದನಿಗೆ -


ಆತನು - ಈ ಜನರಿಗೆ ಯುದ್ಧಪ್ರಾಪ್ತವಾದರೆ ಅವರು ಧೈರ್ಯಗೆಟ್ಟು ಐಗುಪ್ತದೇಶಕ್ಕೆ ಹಿಂದಿರುಗಾರು ಅಂದುಕೊಂಡನು. ಇಸ್ರಾಯೇಲ್ಯರು ಯುದ್ಧಸನ್ನದ್ಧರಾಗಿ ಐಗುಪ್ತದೇಶದಿಂದ ಹೊರಟರು.


ನಾನು ಯಾವ ಹುಡುಗಿಗೆ - ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವದಕ್ಕೆ ಕೊಡು ಎಂದು ಹೇಳುವಾಗ - ನೀನು ಕುಡಿಯಬಹುದು, ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ ಅನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇವಿುಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯವದೆ ಎಂದು ಇದರಿಂದ ನನಗೆ ಗೊತ್ತಾಗುವದು ಅಂದನು.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ


ಹೀಗೆ ಎಲ್ಲರೂ - ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ತೀರಿಸದೆ ಬಿಡಲಿ ಅಂದುಕೊಂಡು ನಮ್ಮನ್ನು ಹೆದರಿಸುವದಕ್ಕೆ ಪ್ರಯತ್ನಿಸಿದರು. [ನನ್ನ ದೇವರೇ,] ನನ್ನ ಕೈಗಳನ್ನು ಬಲಪಡಿಸು.


ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ - ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯತೋರಿಸಿಕೊಡುತ್ತೇವೆ ಅನ್ನಲು ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ - ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ ಎಂದು ಹೇಳಿದನು.


ಅವರ ಮೇಲೆ ಬೀಳುವದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತಾಡಿಕೊಳ್ಳುವದನ್ನು ಲಾಲಿಸು;


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನೂ ಕುರಿತು - ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ ಎಂದು ಕೇಳಿದ್ದಕ್ಕೆ ಅಬೀಷೈಯು - ನಾನು ಬರುತ್ತೇನೆ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು