Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:14 - ಕನ್ನಡ ಸತ್ಯವೇದವು J.V. (BSI)

14 ಅವನ ಜೊತೆಗಾರನು - ಇದು ಇಸ್ರಾಯೇಲ್ಯನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ವಿುದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿದನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಇದು ಇಸ್ರಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿರುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಮನುಷ್ಯನ ಸ್ನೇಹಿತನು ಕನಸಿನ ಅರ್ಥವನ್ನು ತಿಳಿದುಕೊಂಡು ಅವನಿಗೆ, “ನಿನ್ನ ಕನಸು ಇಸ್ರೇಲಿನ ಯೋವಾಷನ ಮಗನಾದ ಗಿದ್ಯೋನನ ಕುರಿತಾಗಿದೆ. ಗಿದ್ಯೋನನು ಮಿದ್ಯಾನ್ಯರ ಇಡೀ ಸೈನ್ಯವನ್ನು ಸೋಲಿಸುವಂತೆ ದೇವರು ಮಾಡುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನ ಜೊತೆಗಾರನು ಉತ್ತರಕೊಟ್ಟು, “ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲಿನ ಮನುಷ್ಯನ ಖಡ್ಗವೇ ಹೊರತು ಬೇರೆ ಅಲ್ಲ. ದೇವರು ಮಿದ್ಯಾನ್ಯರನ್ನೂ, ಈ ಸಮಸ್ತ ಪಾಳೆಯನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:14
14 ತಿಳಿವುಗಳ ಹೋಲಿಕೆ  

ಆಕೆಯು ಮಾಳಿಗೆಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನಂದರೆ - ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿರುವದನ್ನು ಬಲ್ಲೆನು. ನಿಮ್ಮ ನಿವಿುತ್ತ ನಮಗೆ ಮಹಾಭೀತಿಯುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ನೀನು ಅವನಿಗೂ ಅವನ ಮನೆಗೂ ಅವನ ಎಲ್ಲಾ ಸ್ವಾಸ್ತ್ಯಕ್ಕೂ ಸುತ್ತುಮುತ್ತಲು ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


ಯೊರ್ದನಿನ ಪಶ್ಚಿಮದಲ್ಲಿದ್ದ ಎಲ್ಲಾ ಅಮೋರಿಯರ ಅರಸರೂ ಸಮುದ್ರದ ಬಳಿಯಲ್ಲಿದ್ದ ಸರ್ವ ಕಾನಾನ್ ರಾಜರೂ ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನನ್ನು ಬತ್ತಿಸಿ ಅವರನ್ನು ದಾಟಿಸಿದನೆಂದು ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿವಿುತ್ತವಾಗಿ ಅವರಿಗೆ ಧೈರ್ಯವಿಲ್ಲವಾಯಿತು.


ಇದಲ್ಲದೆ ಅವರು ಯೆಹೋಶುವನಿಗೆ - ಯೆಹೋವನು ನಿಜವಾಗಿ ಆ ದೇಶವನ್ನೆಲ್ಲಾ ನಮಗೆ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿವಿುತ್ತ ಕಂಗೆಟ್ಟು ಹೋಗಿದ್ದಾರೆ ಎಂದು ತಿಳಿಸಿದರು.


ಅವರನ್ನು ಆಶೀರ್ವದಿಸುವದಕ್ಕೆ ನನಗೆ ಅಪ್ಪಣೆಯಾಯಿತು; ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.


ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು - ನೀನು ಬಾಲಾಕನ ಬಳಿಗೆ ತಿರಿಗಿಹೋಗಿ ಹೀಗೆ ಹೀಗೆ ಹೇಳಬೇಕು ಎಂದು ಆಜ್ಞಾಪಿಸಿದನು.


ಬಿಳಾಮನು - ಅದಿರಲಿ; ನಾನು ಬಂದಿದ್ದೇನೆ; ಆದರೆ ಏನು? ಏನಾದರೂ ಹೇಳುವದಕ್ಕೆ ನನಗೆ ಶಕ್ತಿಯುಂಟೋ? ದೇವರು ಆಡಿಸುವ ಮಾತನ್ನೇ ಹೇಳುತ್ತೇನಷ್ಟೆ ಎಂದು ಹೇಳಿದನು.


ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು - ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ವಿುದ್ಯಾನ್ಯರ ಪಾಳೆಯದೊಳಗೆ ಬಂದು ಒಂದು ಡೇರೆಗೆ ತಗಲಿ ಅದನ್ನು ಅಡಿಮೇಲು ಮಾಡಿ ಬೀಳಿಸಿ ಬಿಟ್ಟಿತು ಎಂದು ಹೇಳಲು


ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು ಇಸ್ರಾಯೇಲ್ಯರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ - ಏಳಿರಿ, ಯೆಹೋವನು ವಿುದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ ಅಂದನು.


ಅವನು ಅವರ ನಾಯಕನಾಗಿ - ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆಂದು ಹೇಳಲು ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.


ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ - ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯತೋರಿಸಿಕೊಡುತ್ತೇವೆ ಅನ್ನಲು ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ - ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು