Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:15 - ಕನ್ನಡ ಸತ್ಯವೇದವು J.V. (BSI)

15 ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು ಇಸ್ರಾಯೇಲ್ಯರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ - ಏಳಿರಿ, ಯೆಹೋವನು ವಿುದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಸರ್ವೇಶ್ವರನಿಗೆ ಅಡ್ಡಬಿದ್ದು ಇಸ್ರಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು, ಅವರಿಗೆ, “ಏಳಿ, ಸರ್ವೇಶ್ವರ ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕನಸಿನ ಬಗ್ಗೆ ಮತ್ತು ಅದರ ಅರ್ಥದ ಬಗ್ಗೆ ಅವರು ಮಾತನಾಡುವುದನ್ನು ಕೇಳಿದ ಗಿದ್ಯೋನನು ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು. ಆಮೇಲೆ ಗಿದ್ಯೋನನು ಇಸ್ರೇಲರ ಪಾಳೆಯಕ್ಕೆ ಹಿಂದಿರುಗಿದನು. ಗಿದ್ಯೋನನು ಜನರನ್ನು, “ಏಳಿರಿ! ಯೆಹೋವನು ಮಿದ್ಯಾನ್ಯರನ್ನು ಸೋಲಿಸಲು ನಮಗೆ ಸಹಾಯ ಮಾಡುತ್ತಾನೆ” ಎಂದು ಕೂಗಿಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಗಿದ್ಯೋನನು ಆ ಕನಸಿನ ವಿವರವನ್ನೂ, ಅದರ ಅರ್ಥವನ್ನೂ ಕೇಳಿದಾಗ, ಅವನು ಯೆಹೋವ ದೇವರನ್ನು ಆರಾಧಿಸಿ, ಇಸ್ರಾಯೇಲ್ ಪಾಳೆಗೆ ತಿರುಗಿಬಂದು, “ಏಳಿರಿ, ಯೆಹೋವ ದೇವರು ಮಿದ್ಯಾನ್ಯರ ಪಾಳೆಯನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:15
15 ತಿಳಿವುಗಳ ಹೋಲಿಕೆ  

ಆಗ ದೆಬೋರಳು ಬಾರಾಕನಿಗೆ - ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇದೇ; ನಿಶ್ಚಯವಾಗಿ ಆತನು ತಾನೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವನು ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದಿಳಿದನು.


ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.


ಅವರು ಅವನಿಗೆ - ನಮಗೆ ಸ್ವಪ್ನಬಿತ್ತು; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ ಎಂದು ಹೇಳಲು ಯೋಸೇಫನು ಅವರಿಗೆ - ಸ್ವಪ್ನಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ; ದಯಮಾಡಿ ನಿಮ್ಮ ಸ್ವಪ್ನವನ್ನು ನನಗೆ ತಿಳಿಸಿರಿ ಎಂದು ಹೇಳಿದನು.


ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ಬೊಗ್ಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ನೀಟಾದ ದಾರಿಯಲ್ಲಿ ಕರೆದುಕೊಂಡು ಬಂದದ್ದಕ್ಕಾಗಿ ಆತನನ್ನು ಕೊಂಡಾಡಿದೆನು.


ಆಗ ಅವರ ಮೇಲೆ ಬೀಳುವದಕ್ಕೆ ನಿನಗೆ ಧೈರ್ಯ ಬರುವದು ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.


ಅವನ ಜೊತೆಗಾರನು - ಇದು ಇಸ್ರಾಯೇಲ್ಯನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ವಿುದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿದನು ಅಂದನು.


ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ ಉರಿಯುವ ಪಂಜಡಗಿರುವ ಬರಿಕೊಡವನ್ನೂ ಕೊಟ್ಟು


ಆಗ ಗಿದ್ಯೋನನು ಅವರಿಗೆ - ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನ ಎಂಬವರನ್ನು ನನ್ನ ಕೈಗೆ ಒಪ್ಪಿಸಿ ಕೊಟ್ಟ ತರುವಾಯ ನಾನು ನಿಮ್ಮನ್ನು ಜಾಲಿಮುಳ್ಳುಗಳಿಂದಲೂ ಕಾರೆಗಿಡಗಳಿಂದಲೂ ಹೊಡಿಸುವೆನು ಎಂದು ಹೇಳಿದನು.


ಅವನು ಅವರ ನಾಯಕನಾಗಿ - ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆಂದು ಹೇಳಲು ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.


ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು ಎಂದು ಹೇಳಿದಳು. ಆಮೇಲೆ ಅವರು ಯೆಹೋವನಿಗೆ ನಮಸ್ಕರಿಸಿದರು.


ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ - ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯತೋರಿಸಿಕೊಡುತ್ತೇವೆ ಅನ್ನಲು ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ - ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು