Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:16 - ಕನ್ನಡ ಸತ್ಯವೇದವು J.V. (BSI)

16 ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ ಉರಿಯುವ ಪಂಜಡಗಿರುವ ಬರಿಕೊಡವನ್ನೂ ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಲ್ಲದೆ, ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪುಮಾಡಿ ಪ್ರತಿ ಒಬ್ಬನ ಕೈಯಲ್ಲಿ ಕೊಂಬನ್ನೂ ಉರಿಯುವ ಪಂಜಡಗಿರುವ ಬರಿಕೊಡವನ್ನೂ ಕೊಟ್ಟು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಮೇಲೆ ಗಿದ್ಯೋನನು ಆ ಮುನ್ನೂರು ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಗಿದ್ಯೋನನು ಪ್ರತಿಯೊಬ್ಬನಿಗೆ ಒಂದು ತುತ್ತೂರಿ ಮತ್ತು ಒಂದು ಬರಿದಾದ ಮಣ್ಣಿನ ಪಾತ್ರೆಯನ್ನು ಕೊಟ್ಟನು. ಪ್ರತಿಯೊಂದು ಪಾತ್ರೆಯ ಒಳಗಡೆ ಒಂದು ಉರಿಯುತ್ತಿರುವ ಪಂಜು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಮುನ್ನೂರು ಜನರನ್ನು ಮೂರು ಭಾಗವಾಗಿ ಹಂಚಿ, ಎಲ್ಲರ ಕೈಯಲ್ಲಿ ತುತೂರಿಗಳನ್ನೂ, ಬರಿದಾದ ಕೊಡಗಳನ್ನೂ, ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:16
6 ತಿಳಿವುಗಳ ಹೋಲಿಕೆ  

ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.


ಆಗ ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗ ಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು ಹೊಡೆದು ದಮಸ್ಕಪಟ್ಟಣದ ಉತ್ತರ ಕಡೆಯಲ್ಲಿರುವ ಹೋಬಾ ಊರಿನ ತನಕ ಹಿಂದಟ್ಟಿದನು.


ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು ಇಸ್ರಾಯೇಲ್ಯರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ - ಏಳಿರಿ, ಯೆಹೋವನು ವಿುದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ ಅಂದನು.


ಅವರಿಗೆ - ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು.


ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಾಲು ಮಾಡಿ ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ಅವರನ್ನು ಮಧ್ಯಾಹ್ನದವರೆಗೆ ಹತಮಾಡಿದನು; ಉಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು.


ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ - ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು