Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:2 - ಕನ್ನಡ ಸತ್ಯವೇದವು J.V. (BSI)

2 ಆಗ ಯೆಹೋವನು ಗಿದ್ಯೋನನಿಗೆ - ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ವಿುದ್ಯಾನ್ಯರನ್ನು ಒಪ್ಪಿಸುವದು ನನಗೆ ಸರಿಯಾಗಿ ಕಾಣುವದಿಲ್ಲ; ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳ ಪಟ್ಟು ನನ್ನನ್ನು ಅಲಕ್ಷ್ಯಮಾಡಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ; ಏಕೆಂದರೆ ಹಾಗೆ ಒಪ್ಪಿಸಿಕೊಟ್ಟರೆ ಸ್ವಂತ ಶಕ್ತಿಯಿಂದಲೇ ನಮಗೆ ರಕ್ಷಣೆ ಲಭಿಸಿತು ಎಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೆಹೋವನು ಗಿದ್ಯೋನನಿಗೆ, “ನಾನು ಮಿದ್ಯಾನ್ಯರನ್ನು ಸೋಲಿಸಲು ನಿನ್ನ ಜನರಿಗೆ ಸಹಾಯ ಮಾಡುತ್ತೇನೆ. ಆದರೆ ಈ ಕೆಲಸಕ್ಕೆ ನಿನ್ನ ಜನರು ತುಂಬ ಹೆಚ್ಚು. ಇಸ್ರೇಲರು ನನ್ನನ್ನು ಮರೆತು ತಾವೇ ತಮ್ಮನ್ನು ರಕ್ಷಿಸಿಕೊಂಡೆವೆಂದು ಜಂಬಕೊಚ್ಚಿಕೊಳ್ಳುವುದು ನನಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ, ನಾನು ಮಿದ್ಯಾನ್ಯರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವುದಕ್ಕೆ ಸಾಧ್ಯವಿಲ್ಲ ಇಸ್ರಾಯೇಲರು, ‘ನನ್ನ ಕೈ ನನ್ನನ್ನು ರಕ್ಷಿಸಿತು,’ ಎಂದು ನನಗೆ ವಿರೋಧವಾಗಿ ಹೆಚ್ಚಳಪಟ್ಟಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:2
25 ತಿಳಿವುಗಳ ಹೋಲಿಕೆ  

ಈ ಭಾಗ್ಯವು ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗುಂಟಾಯಿತು ಅಂದುಕೊಂಡೀರಿ.


ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.


ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.


ಅದು ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.


ದಾವೀದ ವಂಶದವರ ಮಹಿಮೆಯೂ ಯೆರೂಸಲೇವಿುನವರ ಮಹಿಮೆಯೂ ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ


ನೀನು ನಿನ್ನ ಸೊಬಗಿನ ನಿವಿುತ್ತ ಉಬ್ಬಿದ ಮನಸ್ಸುಳ್ಳವನಾಗಿ ನಿನ್ನ ಮೆರೆತದಿಂದ ನಿನ್ನ ಬುದ್ಧಿಯನ್ನು ಹಾಳುಮಾಡಿಕೊಂಡಿ; ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗುವಂತೆ ಅವರ ಕಣ್ಣಮುಂದೆ ಹಾಕಿದೆನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ - ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ; ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹುಜನರಿಂದಾದರೂ ಸ್ವಲ್ಪಜನರಿಂದಾದರೂ ರಕ್ಷಿಸುವದು ಯೆಹೋವನಿಗೆ ಅಸಾಧ್ಯವಲ್ಲ ಎಂದು ಹೇಳಲು


ಆದರೆ ಅವರ ವಿರೋಧಿಗಳು ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು - ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಂಡಾರೆಂದು ನಾನು ಹಿಂದೆಗೆದೆನು ಎಂಬದೇ.


ಹಾಗಾದರೆ ಹೊಗಳಿಕೊಳ್ಳುವದಕ್ಕೆ ಆಸ್ಪದವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಪ್ರಮಾಣದಿಂದ? ಕರ್ಮಮಾರ್ಗವನ್ನು ಅನುಸರಿಸುವದರಿಂದಲೋ? ಅಲ್ಲ; ವಿಶ್ವಾಸ ಮಾರ್ಗವನ್ನು ಅನುಸರಿಸುವದರಿಂದಲೇ.


ತನ್ನ ಬಲೆಗೆ ಬಲಿಕೊಡುತ್ತಾನೆ, ತನ್ನ ಜಾಲಕ್ಕೆ ಧೂಪಹಾಕುತ್ತಾನೆ; ಅವುಗಳ ಮೂಲಕವೇ ಅವನ ಭೋಜನವು ಪುಷ್ಟಿ, ಅವನ ಆಹಾರವು ರುಚಿ.


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.


ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;


ಏಕಂದರೆ ಅವನು ತನ್ನೊಳಗೆ - ನನ್ನ ಜ್ಞಾನಭುಜ ಬಲಗಳಿಂದಲೇ ಇದನ್ನು ಮಾಡಿದ್ದೇನೆ, ನಾನೇ ವಿವೇಕಿ; ಜನಾಂಗಗಳ ಎಲ್ಲೆಗಳನ್ನು ಕಿತ್ತು ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ;


ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು


ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಆದದರಿಂದ ನಿಮ್ಮ ದೇವರಾದ ಯೆಹೋವನೇ ತಾನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.


ಅಲ್ಲಿ ದೇವರು ರಾತ್ರಿಯ ಸ್ವಪ್ನದಲ್ಲಿ ಇಸ್ರಾಯೇಲನನ್ನು - ಯಾಕೋಬನೇ, ಯಾಕೋಬನೇ ಎಂದು ಕರೆಯಲು, ಅವನು - ಇದ್ದೇನೆ ಅಂದನು.


ಅವರು ವಿುದ್ಯಾನ್ಯರಿಗೆ ಯೆಹೋವನು ಆಜ್ಞಾಪಿಸಿದ ದಂಡನೆಯನ್ನು ಮಾಡಬೇಕು ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು