Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:20 - ಕನ್ನಡ ಸತ್ಯವೇದವು J.V. (BSI)

20 ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ ಕೊಡಗಳನ್ನು ಒಡೆದುಬಿಟ್ಟು ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು - ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ” ಎಂದು ಕೂಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಸರ್ವೇಶ್ವರನಿಗೆ ಪರಾಕು” ಎಂದು ಕೂಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಗಿದ್ಯೋನನ ಮೂರು ಗುಂಪಿನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ತಮ್ಮ ಮಡಕೆಗಳನ್ನು ಒಡೆದುಹಾಕಿದರು. ಅವರು ಪಂಜುಗಳನ್ನು ತಮ್ಮ ಎಡಗೈಗಳಲ್ಲಿಯೂ ತುತ್ತೂರಿಗಳನ್ನು ತಮ್ಮ ಬಲಗೈಗಳಲ್ಲಿಯೂ ಹಿಡಿದುಕೊಂಡರು. ಅವರು ತಮ್ಮ ತುತ್ತೂರಿಗಳನ್ನು ಊದುತ್ತಾ “ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ, ಆ ಕೊಡಗಳನ್ನು ಒಡೆದುಬಿಟ್ಟು, ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ, ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು, “ಯೆಹೋವ ದೇವರಿಗಾಗಿ ಖಡ್ಗ, ಗಿದ್ಯೋನನಿಗಾಗಿ ಖಡ್ಗ,” ಎಂದು ಕೂಗಿ ಪಾಳೆಯ ಸುತ್ತಲೂ ಅವರವರ ಸ್ಥಳದಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:20
14 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.


ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.


ಆದರೆ ಕಡೇ ತುತೂರಿಯ ಧ್ವನಿಯಾಗುವಾಗ ನಾವೆಲ್ಲರು ಒಂದು ಕ್ಷಣದಲ್ಲೇ ರೆಪ್ಪೆ ಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.


ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಮಹತ್ತರವಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ಸ್ವಾಧೀನವಾಯಿತು.


ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ - ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.


ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು;


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ತಾನು ನೀತಿವಂತನೆಂದು ಸಾಕ್ಷಿಹೊಂದಿದನು; ದೇವರು ಅವನ ಕಾಣಿಕೆಗಳನ್ನು ಅಂಗೀಕಾರಮಾಡಿದ್ದೇ ಆ ಸಾಕ್ಷಿ. ಅವನು ಸತ್ತಿದ್ದರೂ ಅವನ ನಂಬಿಕೆಯ ಮೂಲಕ ಇನ್ನೂ ಮಾತಾಡುತ್ತಾನೆ.


ಪ್ರಧಾನದೂತನ ಶಬ್ದದೊಡನೆಯೂ ದೇವರ ತುತೂರಿಧ್ವನಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು.


ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.


ರಾತ್ರಿಯ ಮಧ್ಯಯಾಮವು ಪ್ರಾರಂಭಿಸಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ [ಶತ್ರುಗಳ] ಪಾಳೆಯದ ಅಂಚಿಗೆ ಬಂದು ಕೊಂಬುಗಳನ್ನು ಊದಿ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.


ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು; ಪಾಳೆಯದವರಾದರೋ ಭ್ರಾಂತರಾಗಿ ಕೂಗುತ್ತಾ ಓಡಿಹೋಗ ಪ್ರಾರಂಭಿಸಿದರು.


ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಾಲು ಮಾಡಿ ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ಅವರನ್ನು ಮಧ್ಯಾಹ್ನದವರೆಗೆ ಹತಮಾಡಿದನು; ಉಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು.


ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಣಗಿಕೋ! ಶಾಂತಿಗೊಳ್ಳು, ಸುಮ್ಮನಿರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು