Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:22 - ಕನ್ನಡ ಸತ್ಯವೇದವು J.V. (BSI)

22 ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಗಿದ್ಯೋನನ ಮುನ್ನೂರು ಜನರು ತಮ್ಮ ತುತ್ತೂರಿಗಳನ್ನು ಊದಿದ ಕೂಡಲೆ ಮಿದ್ಯಾನ್ಯರು ತಮ್ಮತಮ್ಮಲ್ಲಿಯೇ ಒಬ್ಬರನ್ನೊಬ್ಬರು ಕತ್ತಿಯಿಂದ ಇರಿದು ಕೊಲ್ಲುವಂತೆ ಯೆಹೋವನು ಮಾಡಿದನು. ಶತ್ರುಗಳ ಸೈನ್ಯವು ಚೆರೇರದ ದಾರಿಯಲ್ಲಿರುವ ಬೇತ್‌ಷಿಟ್ಟಿನವರೆಗೂ ಓಡಿಹೋಯಿತು. ಅವರು ಟಬ್ಬಾತಿನ ಬಳಿಯಲ್ಲಿರುವ ಅಬೇಲ್ಮೆಹೋಲಾ ನಗರದವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮುನ್ನೂರು ಜನರು ತುತೂರಿಗಳನ್ನು ಊದುವಾಗ, ಯೆಹೋವ ದೇವರು ಪಾಳೆಯದಲ್ಲಿ ಎಲ್ಲೆಲ್ಲಿಯೂ ಒಬ್ಬನ ಖಡ್ಗವನ್ನು ಒಬ್ಬನ ಮೇಲೆ ಬರಮಾಡಿದರು. ಪಾಳೆಯ ಚೆರೇರಿನಲ್ಲಿರುವ ಬೇತ್ ಷಿಟ್ಟದವರೆಗೂ, ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾದ ಮೇರೆಯವರೆಗೂ ಓಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:22
18 ತಿಳಿವುಗಳ ಹೋಲಿಕೆ  

ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಅಡಿಯಲ್ಲಿಯೂ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್‍ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಧಿಪತಿಯಾದ ಅಹೀಲೂದನ ಮಗನಾದ ಬಾಣಾ.


ಅವರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವದಕ್ಕೆ ಪ್ರಾರಂಭಿಸಿದರು.


ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲ್ಯರ ಅರಸನನ್ನಾಗಿಯೂ ಅಬೇಲ್‍ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭೀಷೇಕಿಸು.


ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಮಹತ್ತರವಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ಸ್ವಾಧೀನವಾಯಿತು.


ಐಗುಪ್ತ್ಯರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು; ಅಣ್ಣತಮ್ಮಂದಿರು, ನೆರೆಹೊರೆಯವರು, ಪಟ್ಟಣ ಪಟ್ಟಣಗಳು, ರಾಷ್ಟ್ರ ರಾಷ್ಟ್ರಗಳು ಪರಸ್ಪರವಾಗಿ ಹೋರಾಡುವವು.


ಅವರಿಗೆ ಭಾರವಾದ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ವಿುದ್ಯಾನಿನ ನಾಶದಿನದಲ್ಲಿ ಮುರಿದುಬಿಟ್ಟಂತೆ ಮುರಿದುಬಿಟ್ಟಿದ್ದೀ.


ನೀನು ವಿುದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್‍ಹಳ್ಳದ ಬಳಿಯಲ್ಲಿ ಸೀಸೆರ ಯಾಬೀನ್ ಎಂಬವರಿಗೆ ಮಾಡಿದಂತೆ ಇವರಿಗೂ ಮಾಡು.


ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ - ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.


ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು;


ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.


ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ರೀಯೇಲ್ ಎಂಬವನಿಗೆ ಮದುವೆಮಾಡಿಕೊಟ್ಟನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು.


ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ.


ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.


ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ, ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ; ಸುಗ್ಗಿಕಾಲದಲ್ಲಿ ಜನರು ಹರ್ಷಿಸುವ ಹಾಗೂ ಕೊಳ್ಳೆಯನ್ನು ಹಂಚಿಕೊಳ್ಳುವವರು ಹೆಚ್ಚಳಪಡುವ ಹಾಗೂ ನಿನ್ನ ಮುಂದೆ ಆನಂದಿಸುತ್ತಾರೆ.


ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವದು; ಒಬ್ಬರ ಕೈಯನ್ನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು