24 ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಅಟ್ಟಿ ಅಲ್ಲಿನವರಿಗೆ - ನೀವು ವಿುದ್ಯಾನ್ಯರಿಗೆ ವಿರೋಧವಾಗಿ ಹೊರಟು ಅವರು ಬೇತ್‍ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ದಾಟಿ ಹೋಗದಂತೆ ಅಡ್ಡಗಟ್ಟಿರಿ ಎಂದು ಹೇಳಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಯೊರ್ದನ್‍ಹೊಳೆಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.
24 ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್‌ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್‌ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು.
24 ಇದಲ್ಲದೆ, ಗಿದ್ಯೋನನು ಎಫ್ರಯಿಮ್ ಪರ್ವತ ಪ್ರದೇಶಗಳಿಗೆ ದೂತರನ್ನು ಅಟ್ಟಿ ಆ ಜನರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು, ಅವರು ಬೇತ್ ಬಾರದವರೆಗಿರುವ ಪ್ರವಾಹಗಳನ್ನೂ ಜೋರ್ಡನ್ ನದಿಯನ್ನೂ ದಾಟಿಹೋಗದಂತೆ ಅಡ್ಡಗಟ್ಟಿರಿ,” ಎಂದು ಹೇಳಿಕಳಿಸಿದನು. ಆಗ ಎಫ್ರಯಿಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಜೋರ್ಡನ್ ನದಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.
24 ಗಿದ್ಯೋನನು ಎಫ್ರಾಯೀಮ್ ಬೆಟ್ಟಪ್ರದೇಶಗಳಿಗೆ ದೂತರನ್ನು ಕಳುಹಿಸಿದನು. ಆ ದೂತರು, “ಬನ್ನಿ, ಮಿದ್ಯಾನ್ಯರ ಮೇಲೆ ಧಾಳಿ ಮಾಡಿರಿ. ಬೇತ್‌ಬಾರದವರೆಗಿನ ನದಿಯ ಮತ್ತು ಜೋರ್ಡನ್ ನದಿಯ ಪ್ರದೇಶವನ್ನು ಹಿಡಿದುಕೊಳ್ಳಿರಿ. ಮಿದ್ಯಾನ್ಯರು ಅಲ್ಲಿಗೆ ಬರುವ ಮೊದಲೇ ಈ ಕೆಲಸವನ್ನು ಮಾಡಿರಿ” ಎಂದು ತಿಳಿಸಿದರು. ಅವರು ಎಫ್ರಾಯೀಮ್ ಕುಲದ ಎಲ್ಲ ಜನರನ್ನು ಕರೆದರು. ಅವರು ಬೇತ್‌ಬಾರಾದವರೆಗೆ ನದಿಯ ಪ್ರದೇಶವನ್ನು ಹಿಡಿದುಕೊಂಡರು.
24 ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಬೆಟ್ಟದಲ್ಲೆಲ್ಲಾ ದೂತರನ್ನು ಕಳುಹಿಸಿ, “ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ, ಬೇತ್‌ಬಾರದವರೆಗಿರುವ ನೀರನ್ನೂ, ಯೊರ್ದನನ್ನೂ ಅವರಿಗೆ ಮುಂದಾಗಿ ಹಿಡಿಯಿರಿ,” ಎಂದು ಹೇಳಿದನು. ಹಾಗೆಯೇ ಎಫ್ರಾಯೀಮನ ಜನರೆಲ್ಲರೂ ಕೂಡಿಕೊಂಡು, ಬೇತ್‌ಬಾರದವರೆಗೆ ನೀರನ್ನೂ, ಯೊರ್ದನನ್ನೂ ಹಿಡಿದರು.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.
ಇದಲ್ಲದೆ ಅವರು ಎಫ್ರಾಯೀವಿುಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದರೆ ಅವರು - ನೀನು ಎಫ್ರಾಯೀಮ್ಯನೋ ಎಂದು ಕೇಳುವರು.
ದೇವರು ನಿಮ್ಮ ಕೈಯಲ್ಲಿ ವಿುದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.