Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:3 - ಕನ್ನಡ ಸತ್ಯವೇದವು J.V. (BSI)

3 ಆದದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ - ಧೈರ್ಯವಿಲ್ಲದವರೂ ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದ್ದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, “ಭಯಬೀತರೂ ಅಂಜುಬುರುಕರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ,’ ಎಂದು ಪ್ರಕಟಿಸು,” ಎಂದರು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದಕ್ಕಾಗಿ ಈಗ, ‘ಭಯಪಡುವವರೆಲ್ಲರು ಗಿಲ್ಯಾದ್ ಬೆಟ್ಟವನ್ನು ಬಿಟ್ಟುಹೋಗಬಹುದು’ ಎಂದು ಪ್ರಕಟಿಸು” ಎಂದು ಹೇಳಿದನು. ಆ ಸಮಯದಲ್ಲಿ ಇಪ್ಪತ್ತೆರಡು ಸಾವಿರ ಜನರು ಗಿದ್ಯೋನನನ್ನು ಬಿಟ್ಟು ಮನೆಗೆ ಹಿಂದಿರುಗಿದರು. ಆದರೆ ಇನ್ನೂ ಹತ್ತು ಸಾವಿರ ಜನರು ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ನೀನು ಹೋಗಿ ಜನರು ಕೇಳುವ ಹಾಗೆ, ‘ಯಾವನಿಗೆ ಭಯವೂ, ಹೆದರಿಕೆಯೂ ಉಂಟೋ ಅವನು ತಿರುಗಿ ತ್ವರೆಯಾಗಿ ಗಿಲ್ಯಾದ್ ಬೆಟ್ಟದಿಂದ ಹೋಗಲಿ,’ ಎಂದು ಪ್ರಕಟಮಾಡು,” ಎಂದರು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ಜನರು ತಿರುಗಿ ಹೋದರು; ನಂತರ ಹತ್ತು ಸಾವಿರ ಜನರು ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:3
7 ತಿಳಿವುಗಳ ಹೋಲಿಕೆ  

ಮತ್ತು - ಯಾವನಾದರೂ ಧೈರ್ಯಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವದರಿಂದ ಅವನ ಜೊತೆಗಾರರೂ ದಿಗಿಲು ಪಟ್ಟಾರು ಎಂದು ಹೇಳಬೇಕು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಈ ಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು ಎಂದು ಹೇಳಿದನು.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿ ಬೀಳುತ್ತಾನೆ; ಇವನೇ ಬೀಜ ಬಿದ್ದ ಬಂಡೆಯ ನೆಲವಾಗಿರುವವನು.


ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇರ್ ಜೆಬುಲೂನ್ ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು