Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:7 - ಕನ್ನಡ ಸತ್ಯವೇದವು J.V. (BSI)

7 ಆಗ ಯೆಹೋವನು ಗಿದ್ಯೋನನಿಗೆ - ನೀರನ್ನು ನೆಕ್ಕಿದ ಆ ಮುನ್ನೂರು ಮಂದಿಯಿಂದಲೇ ನಿಮಗೆ ಜಯವನ್ನುಂಟುಮಾಡಿ ವಿುದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಸರ್ವೇಶ್ವರ ಗಿದ್ಯೋನನಿಗೆ, “ನೀರನ್ನು ನೆಕ್ಕಿದ ಆ ಮೂನ್ನೂರು ಮಂದಿಯಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಗಿದ್ಯೋನನಿಗೆ, “ನಾಯಿಯಂತೆ ನೀರನ್ನು ನೆಕ್ಕಿದ ಮುನ್ನೂರು ಮಂದಿಯಿಂದಲೇ ಮಿದ್ಯಾನ್ಯರನ್ನು ಸೋಲಿಸಿ ನಿಮ್ಮನ್ನು ರಕ್ಷಿಸುವೆನು. ಉಳಿದವರು ತಮ್ಮ ಮನೆಗಳಿಗೆ ಹೋಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಹೋವ ದೇವರು ಗಿದ್ಯೋನನಿಗೆ, “ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ, ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸುವೆನು. ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:7
6 ತಿಳಿವುಗಳ ಹೋಲಿಕೆ  

ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ - ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ; ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹುಜನರಿಂದಾದರೂ ಸ್ವಲ್ಪಜನರಿಂದಾದರೂ ರಕ್ಷಿಸುವದು ಯೆಹೋವನಿಗೆ ಅಸಾಧ್ಯವಲ್ಲ ಎಂದು ಹೇಳಲು


ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು.


ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ವಿುದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳುಕೊಂಡಿತ್ತು.


ಆದದರಿಂದ ಅವನು ತಿರಿಗಿ ಯೆಹೋವನನ್ನು ಕೇಳಿದನು. ಆತನು - ನೀನೆದ್ದು ಕೆಯೀಲಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು