Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:12 - ಕನ್ನಡ ಸತ್ಯವೇದವು J.V. (BSI)

12 ಜೆಬಹನೂ ಚಲ್ಮುನ್ನನೂ ಓಡಿ ಹೋಗಲಾಗಿ ಅವರನ್ನು ಹಿಂದಟ್ಟಿ ಹಿಡಿದು ಅವರ ಸೈನ್ಯವನ್ನು ಚದರಿಸಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜೆಬಹನೂ ಮತ್ತು ಚಲ್ಮುನ್ನನೂ ಓಡಿಹೋಗಲಾಗಿ, ಅವರನ್ನು ಹಿಂದಟ್ಟಿ ಹಿಡಿದು, ಅವರ ಸೈನ್ಯವನ್ನು ಚದರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜೆಬಹನೂ ಚಲ್ಮುನ್ನನೂ ಓಡಿಹೋಗುವಾಗ ಅವರನ್ನು ಹಿಂದಟ್ಟಿ ಹಿಡಿದು ಅವರ ಸೈನ್ಯವನ್ನು ಚದರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮಿದ್ಯಾನ್ಯರ ಅರಸರಾದ ಜೆಬಹನೂ ಚಲ್ಮುನ್ನನೂ ಓಡಿಹೋದರು. ಆದರೆ ಗಿದ್ಯೋನನು ಬೆನ್ನಟ್ಟಿ ಆ ಅರಸರನ್ನು ಹಿಡಿದುಕೊಂಡನು. ಗಿದ್ಯೋನ ಮತ್ತು ಅವನ ಸೈನಿಕರು ಶತ್ರುಸೈನ್ಯವನ್ನು ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜೆಬಹನೂ, ಚಲ್ಮುನ್ನನೂ ಓಡಿ ಹೋದದ್ದರಿಂದ, ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹನನ್ನೂ, ಚೆಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ಪಾಳೆಯನ್ನೆಲ್ಲಾ ಚದರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:12
12 ತಿಳಿವುಗಳ ಹೋಲಿಕೆ  

ಓರೇಬ್ ಜೇಬ್ ಎಂಬವರ ಗತಿಯು ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.


ವೇಗಿಗೂ ಓಡಿಹೋಗುವದಕ್ಕೆ ಶಕ್ತಿಯಿರದು, ಬಲಿಷ್ಟನು ತನ್ನ ಬಲವನ್ನು ಸ್ಥಿರಪಡಿಸಿಕೊಳ್ಳನು, ಪರಾಕ್ರವಿುಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು,


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು.


ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದು


ಇಗೋ, ಕೂಷಾನಿನ ಗುಡಾರಗಳು ಸಂಕಟಪಡುತ್ತಿವೆ, ವಿುದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ.


ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ, ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ; ಸುಗ್ಗಿಕಾಲದಲ್ಲಿ ಜನರು ಹರ್ಷಿಸುವ ಹಾಗೂ ಕೊಳ್ಳೆಯನ್ನು ಹಂಚಿಕೊಳ್ಳುವವರು ಹೆಚ್ಚಳಪಡುವ ಹಾಗೂ ನಿನ್ನ ಮುಂದೆ ಆನಂದಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು