Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:15 - ಕನ್ನಡ ಸತ್ಯವೇದವು J.V. (BSI)

15 ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ - ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವದಕ್ಕೆ ಜೆಬಹ, ಚಲ್ಮುನ್ನ ಎಂಬವರನ್ನು ಕೈಕಟ್ಟಿ ಸ್ವಾಧೀನ ಮಾಡಿಕೊಂಡಿದ್ದೀಯೋ ಎಂದು ನನ್ನನ್ನು ನಿಂದಿಸಿದಿರಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ಕೈಕಟ್ಟಿ ಸ್ವಾಧೀನಮಾಡಿಕೊಂಡಿದ್ದೀಯೋ? ಎಂದು ನನ್ನನ್ನು ನಿಂದಿಸಿದಿರಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “’ದಣಿದಿರುವ ನಿನ್ನ ಸೈನಿಕರಿಗಾಗಿ ನಾವು ರೊಟ್ಟಿ ಕೊಡುವುದಕ್ಕೆ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೈಕಟ್ಟಿ ಸ್ವಾಧೀನ ಮಾಡಿಕೊಂಡಿದ್ದೀಯೋ?,’ ಎಂದು ನನ್ನನ್ನು ನಿಂದಿಸಿದಿರಲ್ಲವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಗಿದ್ಯೋನನು ಸುಖೋತ್ ನಗರಕ್ಕೆ ಬಂದು ಆ ನಗರದ ಜನರಿಗೆ, “ನೋಡಿರಿ, ಜೆಬಹ ಮತ್ತು ಚಲ್ಮುನ್ನ ಇಲ್ಲಿದ್ದಾರೆ. ‘ಜೆಬಹ ಮತ್ತು ಚಲ್ಮುನ್ನರನ್ನು ನೀವು ಇನ್ನೂ ಸೆರೆಹಿಡಿದಿಲ್ಲ. ನಿಮ್ಮ ದಣಿದ ಸೈನಿಕರಿಗೆ ಆಹಾರವನ್ನು ನಾವೇಕೆ ಕೊಡಬೇಕು?’ ಎಂದು ನನ್ನನ್ನು ತಮಾಷೆ ಮಾಡಿದಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಗಿದ್ಯೋನನು ಸುಕ್ಕೋತಿನ ಮನುಷ್ಯರ ಬಳಿಗೆ ಬಂದು, “ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ, ಜೆಬಹ, ಚೆಲ್ಮುನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ, ಚಲ್ಮುನ್ನನನ್ನೂ ನೋಡಿರಿ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:15
4 ತಿಳಿವುಗಳ ಹೋಲಿಕೆ  

ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು ಆ ಊರಿನ ಮುಖಂಡರೂ ಹಿರಿಯರೂ ಯಾರಾರೆಂದು ವಿಚಾರಿಸಿ ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರಿಸಿಕೊಂಡನು.


ನೋಡಿರಿ, ಅವರು ಇಲ್ಲಿರುತ್ತಾರೆ ಅಂದು ಊರಿನ ಹಿರಿಯರನ್ನೂ ಮುಖಂಡರನ್ನೂ ಜಾಲಿ ಮುಳ್ಳುಗಳಿಂದಲೂ ಕಾರೆಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿಕಲಿಸಿದನು.


ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು