ನ್ಯಾಯಸ್ಥಾಪಕರು 8:2 - ಕನ್ನಡ ಸತ್ಯವೇದವು J.V. (BSI)2 ಆಗ ಅವನು ಅವರಿಗೆ - ನೀವು ಮಾಡಿದ ಕಾರ್ಯಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದೆನು? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸರಿಸಮಾನ ಆದದ್ದನ್ನು ನಾನೇನು ಮಾಡಿದೆ? ಅಭೀಯಿಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಯಿಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಗಿದ್ಯೋನನು ಎಫ್ರಾಯೀಮ್ಯರಿಗೆ, “ನೀವು ಮಾಡಿದಷ್ಟು ದೊಡ್ಡ ಕೆಲಸವನ್ನು ನಾನು ಮಾಡಿಲ್ಲ. ನನ್ನ ಅಬೀಯೆಜೆರನ ಕುಟುಂಬದವರಿಗಿಂತ ಎಫ್ರಾಯೀಮ್ಯರಾದ ನಿಮ್ಮ ಸುಗ್ಗಿಯೇ ಬಹಳ ಚೆನ್ನಾಗಿ ಆಗಿದೆಯಲ್ಲವೇ? ಸುಗ್ಗಿಯ ಕಾಲದಲ್ಲಿ ನಮ್ಮ ಕುಟುಂಬದವರು ಕೂಡಿಸುವ ದ್ರಾಕ್ಷಿಗಿಂತ ಹೆಚ್ಚು ದ್ರಾಕ್ಷಿಯನ್ನು ನೀವು ಹೊಲದಲ್ಲಿಯೇ ಬಿಟ್ಟುಬಿಡುತ್ತೀರಿ! ಇದು ನಿಜವಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಅವರಿಗೆ, “ನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿದೆನು? ಅಬೀಯೆಜೆರನ ದ್ರಾಕ್ಷಿ ಫಲ ಕೂಡಿಸುವುದಕ್ಕಿಂತ ಎಫ್ರಾಯೀಮನ ಉಳಿದ ದ್ರಾಕ್ಷಿಗಳನ್ನು ಸಂಗ್ರಹಿಸುವುದು ಉತ್ತಮವಲ್ಲವೇ? ಅಧ್ಯಾಯವನ್ನು ನೋಡಿ |