Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:33 - ಕನ್ನಡ ಸತ್ಯವೇದವು J.V. (BSI)

33 ಗಿದ್ಯೋನನು ಸತ್ತನಂತರ ಇಸ್ರಾಯೇಲ್ಯರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‍ಬೆರೀತನನ್ನು ತಮಗೆ ದೇವರು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‌ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಗಿದ್ಯೋನನು ಸತ್ತನಂತರ ಇಸ್ರಯೇಲರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್ ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಗಿದ್ಯೋನನು ಸತ್ತಮೇಲೆ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರು ಬಾಳನನ್ನು ಪೂಜಿಸಿದರು. ಬಾಳ್‌ಬೇರಿತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಗಿದ್ಯೋನನ ಮರಣದ ತರುವಾಯ, ಇಸ್ರಾಯೇಲರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜೆ ಮಾಡುತ್ತಾ ಬಾಳ್ ಬೆರೀತನ್ನು ತಮಗೆ ದೇವರಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:33
17 ತಿಳಿವುಗಳ ಹೋಲಿಕೆ  

ಶೆಕೆವಿುನ ಕೋಟೆಯವರು ಇದನ್ನು ಕೇಳಿ ಏಲ್‍ಬೆರೀತೆಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು.


ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಕಾಕಪೋಕರನ್ನು ಕೂಡಿಸಿ


ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲ್ಯರು ತಿರುಗಿಕೊಂಡು ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ ಸೇವಿಸಿ ಅವುಗಳಿಗೆ ಅಡ್ಡಬಿದ್ದರು; ಅವರು ಈ ತಮ್ಮ ದುರ್ಮಾರ್ಗವನ್ನೂ ಮೊಂಡತನವನ್ನೂ ಬಿಡಲೇ ಇಲ್ಲ.


ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದರಿಂದ ಇಸ್ರಾಯೇಲ್ಯರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.


ಇಸ್ರಾಯೇಲ್ಯರು ಅವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪಿತೃಗಳ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು; ಅವರಂತೆ ನಡೆಯಲೇ ಇಲ್ಲ.


ಕಲ್ಲು ಮರಗಳೊಡನೆ ಹಾದರಮಾಡಿ ಲಘುವೆಂದು ಭಾವಿಸಿಕೊಂಡ ತನ್ನ ಸೂಳೆತನದಿಂದ ದೇಶವನ್ನು ಅಪವಿತ್ರಪಡಿಸಿದಳು.


ಯಾಜಕನಾದ ಯೆಹೋಯಾದಾವನು ಅವನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.


ಆ ಊರಿನವರು ಒಂದಾನೊಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು ಆಲೆಗಳಲ್ಲಿ ರಸತೆಗೆದು ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲ್ಯರಿಗೋಸ್ಕರ ನಡಿಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಸೇವಿಸುತ್ತಿದ್ದರು.


ತಮ್ಮ ಪಿತೃಗಳನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಯೆಹೋವನನ್ನು ರೇಗಿಸಿದರು.


ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು.


ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವದು? ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ;


ಇಸ್ರಾಯೇಲ್ಯರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸಹತ್ತಿ ಯೆಹೋವನನ್ನು ಬಿಟ್ಟೇ ಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು