Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:1 - ಕನ್ನಡ ಸತ್ಯವೇದವು J.V. (BSI)

1 ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆವಿುಗೆ ಹೋಗಿ ತನ್ನ ಸೋದರ ಮಾವಂದಿರಿಗೂ ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರಮಾವಂದಿರಿಗೂ, ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ‘ಯೆರುಬ್ಬಾಳ’ನ ಮಗ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರ ಮಾವಂದಿರಿಗೂ ತಾಯಿಯ ಬಂಧುಗಳೆಲ್ಲರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಬೀಮೆಲೆಕನು ಯೆರುಬ್ಬಾಳನ (ಗಿದ್ಯೋನನ) ಮಗನು. ಅಬೀಮೆಲೆಕನು ಶೆಕೆಮಿನಲ್ಲಿದ್ದ ತನ್ನ ಸೋದರ ಮಾವಂದಿರಲ್ಲಿಗೆ ಹೋದನು. ಅವನು ತನ್ನ ಸೋದರ ಮಾವಂದಿರಿಗೂ ತನ್ನ ತಾಯಿಯ ಕುಟುಂಬದವರೆಲ್ಲರಿಗೂ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ, ಅವರ ಸಂಗಡ ಮತ್ತು ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆಲ್ಲರ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:1
13 ತಿಳಿವುಗಳ ಹೋಲಿಕೆ  

ಅವನು ಶೆಕೆವಿುನಲ್ಲಿದ್ದ ತನ್ನ ಉಪಪತ್ನಿಯಲ್ಲಿ ಇನ್ನೊಬ್ಬ ಮಗನು ಹುಟ್ಟಲು ಅವನಿಗೆ ಅಬೀಮೆಲೆಕನೆಂದು ಹೆಸರಿಟ್ಟನು.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಯಾರೊಬ್ಬಾಮನು ಹಿಂದಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲ್ಯರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರಿಸಿ ತಮ್ಮ ಅರಸನನ್ನಾಗಿ ನೇವಿುಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.


ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿ ಎಲ್ಲಾ ಇಸ್ರಾಯೇಲ್ಯರೊಡನೆ ರೆಹಬ್ಬಾಮನ ಬಳಿಗೆ ಹೋಗಿ ಅವನಿಗೆ -


ರೆಹಬ್ಬಾಮನು ಶೆಕೆವಿುಗೆ ಹೋದನು; ಅಲ್ಲಿ ಎಲ್ಲಾ ಇಸ್ರಾಯೇಲ್ಯರೂ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಕೂಡಿ ಬಂದಿದ್ದರು.


ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲ್ಯರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.


ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಮಾನಭಂಗ ಪಡಿಸಿದನು.


ಯಾಕೋಬನು ಪದ್ದನ್ಅರಾವಿುನಿಂದ ಬಂದ ಮೇಲೆ ಕಾನಾನ್‍ದೇಶದ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಊರಿನ ಮುಂದೆ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.


ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.


ಗಡ್ಡ ಬೋಳಿಸಿ ಬಟ್ಟೆಹರಿದು ಗಾಯಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಒಂದು ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.


ಇಸ್ರಾಯೇಲ್ಯರು ನಫ್ತಾಲಿಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತದಲ್ಲಿ ಕೆದೆಷ್, ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಶೆಕೆಮ್, ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬೀ ಪಟ್ಟಣಗಳನ್ನು ನೇವಿುಸಿದರು.


ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು