Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:20 - ಕನ್ನಡ ಸತ್ಯವೇದವು J.V. (BSI)

20 ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆವಿುನವರನ್ನೂ ವಿುಲ್ಲೋ ಕೋಟೆಯವರನ್ನೂ ದಹಿಸಿ ಬಿಡಲಿ; ಶೆಕೆವಿುನವರಿಂದಲೂ ವಿುಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿ ಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ, ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೆಕೆಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇಲ್ಲವಾದರೆ, ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ ಮಿಲ್ಲೋ ಕೋಟೆಯವರನ್ನೂ ಸುಟ್ಟುಬಿಡಲಿ; ಶೆಕೆಮಿನವರಿಂದಲೂ ಮಿಲ್ಲೋ ಕೋಟೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ಸುಟ್ಟುಬಿಡಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿ ಹೊರಟು ಶೆಕೆಮಿನ ಹಿರಿಯರನ್ನೂ, ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನರಿಂದಲೂ, ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:20
14 ತಿಳಿವುಗಳ ಹೋಲಿಕೆ  

ಅದು - ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ದಹಸಿಬಿಡುವದು ಎಂದಿತು.


ಅವರ ಮೇಲೆ ಕೆಂಡಗಳು ಸುರಿಯಲಿ; ಅವರು ಅಗ್ನಿಕುಂಡದೊಳಕ್ಕೂ ದೊಡ್ಡ ಮಡುವಿನೊಳಕ್ಕೂ ದೊಬ್ಬಲ್ಪಟ್ಟು ತಿರಿಗಿ ಏಳದಿರಲಿ.


ಅವರ ದುಷ್ಕೃತ್ಯಗಳಿಗೂ ಕೆಡುಕುಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.


ಯೆಹೋವನು ಅವನಿಗೂ ಶೆಕೆವಿುನ ಹಿರಿಯರಿಗೂ ವೈಮನಸ್ಯ ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.


ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.


ತರುವಾಯ ಎಲ್ಲಾ ಶೆಕೆವಿುನವರೂ ವಿುಲ್ಲೋ ಕೋಟೆಯವರೂ ಶೆಕೆವಿುನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಏರ್ಪಡಿಸಿಕೊಂಡರು.


ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ.


ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಗೆ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.


ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆವಿುನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು