Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:43 - ಕನ್ನಡ ಸತ್ಯವೇದವು J.V. (BSI)

43 ಇದು ಅಬೀಮೆಲೆಕನಿಗೆ ಗೊತ್ತಿದ್ದದರಿಂದ ಅವನು ತನ್ನ ಜನರನ್ನು ಮೂರು ಗುಂಪು ಮಾಡಿ ಅವರನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚಿ ನೋಡುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವದನ್ನು ಇವನು ಕಾಣುತ್ತಲೆ ಅಲ್ಲಿಂದ ಎದ್ದು ಅವರನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಇದು ಅಬೀಮೆಲೆಕನಿಗೆ ಗೊತ್ತಿದ್ದುದರಿಂದ ಅವನು ತನ್ನ ಜನರನ್ನು ಮೂರು ಗುಂಪು ಮಾಡಿ ಅವರನ್ನು ಕರೆದುಕೊಂಡು ಬಂದು ಹೊಲಗಳಲ್ಲಿ ಹೊಂಚಿ ನೋಡುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವುದನ್ನು ಇವನು ಕಾಣುತ್ತಲೇ, ಅಲ್ಲಿಂದ ಎದ್ದು ಅವರನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಇದು ಅಬೀಮೆಲೆಕನಿಗೆ ಗೊತ್ತಿದ್ದುದರಿಂದ ಅವನು ತನ್ನ ಜನರನ್ನು ಮೂರು ಗುಂಪುಮಾಡಿ ಅವರನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವುದನ್ನು ಇವನು ಕಾಣುತ್ತಲೆ ಅಲ್ಲಿಂದ ಎದ್ದು ಅವರ ಮೇಲೆ ದಾಳಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಅಬೀಮೆಲೆಕನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಅವನು ಶೆಕೆಮಿನ ಜನರ ಮೇಲೆ ಹಠಾತ್ತನೆ ಧಾಳಿ ಮಾಡಬಯಸಿದ್ದನು. ಆದ್ದರಿಂದ ಅವನು ತನ್ನ ಜನರನ್ನು ಹೊಲಗಳಲ್ಲಿ ಅಡಗಿಸಿಟ್ಟನು. ನಗರದಿಂದ ಜನರು ಹೊರಗೆ ಬರುವುದನ್ನು ನೋಡಿದ ತಕ್ಷಣ ಅವನು ನೆಗೆದೆದ್ದು ಅವರ ಮೇಲೆ ಧಾಳಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅವನು ಸೈನಿಕರನ್ನು ತೆಗೆದುಕೊಂಡು, ಅವರನ್ನು ಮೂರು ಗುಂಪುಗಳಾಗಿ ಮಾಡಿ, ಹೊಲದಲ್ಲಿ ಹೊಂಚಿಹಾಕಿಕೊಂಡನು. ಆಗ ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು, ಅವರನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:43
4 ತಿಳಿವುಗಳ ಹೋಲಿಕೆ  

ಮರುದಿವಸ ಜನರು ಬೈಲಿಗೆ ಹೊರಟು ಬಂದರು;


ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆವಿುನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.


ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಾಲು ಮಾಡಿ ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ಅವರನ್ನು ಮಧ್ಯಾಹ್ನದವರೆಗೆ ಹತಮಾಡಿದನು; ಉಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು.


ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ - ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು