ನ್ಯಾಯಸ್ಥಾಪಕರು 9:48 - ಕನ್ನಡ ಸತ್ಯವೇದವು J.V. (BSI)48 ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೊನ್ ಗುಡ್ಡವನ್ನೇರಿ ತನ್ನವರಿಗೆ - ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಳ್ಳಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೋನ್ ಗುಡ್ಡವನ್ನೇರಿ ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಳ್ಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ,” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಆದ್ದರಿಂದ ಅಬೀಮೆಲೆಕ ಮತ್ತು ಅವನ ಜನರು ಚಲ್ಮೋನ್ ಬೆಟ್ಟವನ್ನು ಹತ್ತಿಹೋದರು. ಅಬೀಮೆಲೆಕನು ಒಂದು ಕೊಡಲಿಯನ್ನು ತೆಗೆದುಕೊಂಡು ಕೆಲವು ಕೊಂಬೆಗಳನ್ನು ಕಡಿದನು. ಅವನು ಆ ಕೊಂಬೆಗಳನ್ನು ಹೊತ್ತುಕೊಂಡು ಹೊರಟನು. ಅಬೀಮೆಲೆಕನು ತನ್ನ ಸಂಗಡಿಗರಿಗೆ, “ನಾನು ಮಾಡಿದಂತೆಯೇ ನೀವು ಬೇಗನೆ ಮಾಡಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಅಬೀಮೆಲೆಕನು ತನ್ನ ಸಂಗಡ ಇದ್ದ ಸೈನಿಕರೆಲ್ಲರ ಸಹಿತವಾಗಿ ಚಲ್ಮೋನ್ ಬೆಟ್ಟವನ್ನೇರಿ, ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು, ಒಂದು ಮರದ ಕೊಂಬೆಯನ್ನು ಕಡಿದು, ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು, ತನ್ನ ಕೂಡ ಇದ್ದ ಜನರಿಗೆ, “ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ,” ಎಂದನು. ಅಧ್ಯಾಯವನ್ನು ನೋಡಿ |