Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:7 - ಕನ್ನಡ ಸತ್ಯವೇದವು J.V. (BSI)

7 ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ - ಶೆಕೆವಿುನವರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮಗೆ ಕಿವಿಗೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೋತಾಮನು ಇದನ್ನು ಕೇಳಿ, ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಶೆಕೆಮಿನ ಜನರೇ, ನನ್ನ ಮಾತಿಗೆ ಕಿವಿಗೊಡಿ; ಆಗ ದೇವರೂ ನಿಮ್ಮ ಮೊರೆಗೆ ಕಿವಿಗೊಡುವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾಮನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾಮನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು: “ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೋತಾಮನಿಗೆ ಇದನ್ನು ತಿಳಿಸಿದಾಗ, ಅವನು ಹೋಗಿ ಗೆರಿಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು, ತನ್ನ ಸ್ವರವನ್ನೆತ್ತಿ ಕೂಗಿ ಅವರಿಗೆ, “ಶೆಕೆಮಿನ ಹಿರಿಯರೇ, ದೇವರು ನಿಮ್ಮನ್ನು ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:7
17 ತಿಳಿವುಗಳ ಹೋಲಿಕೆ  

ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.


ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು; ಆದರೆ ನೀವು ಆರಾಧನೆಮಾಡತಕ್ಕ ಸ್ಥಳವು ಯೆರೂಸಲೇವಿುನಲ್ಲಿ ಅದೆ ಅನ್ನುತ್ತೀರಿ ಎಂದು ಹೇಳಿದಾಗ


ನೀವು ಯೊರ್ದನ್ ಹೊಳೆಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾಮೀನ್ ಎಂಬೀ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.


ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ಬಡವನ ಮೊರೆಗೆ ಕಿವಿಮುಚ್ಚಿಕೊಳ್ಳುವವನು ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಎಲ್ಲಾ ಇಸ್ರಾಯೇಲ್ಯರು ಅಂದರೆ ಹಿರಿಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಅನ್ಯದೇಶಸ್ಥರೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಡೆಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ ಏಬಾಲ್ ಬೆಟ್ಟದ ಕಡೆ ಅರ್ಧಜನರೂ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವದಕ್ಕೋಸ್ಕರ ನಿಂತರು.


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ಆ ಬೆಟ್ಟಗಳು ಯೊರ್ದನ್ ಹೊಳೆಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಅವೆ.


ತರುವಾಯ ಎಲ್ಲಾ ಶೆಕೆವಿುನವರೂ ವಿುಲ್ಲೋ ಕೋಟೆಯವರೂ ಶೆಕೆವಿುನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಏರ್ಪಡಿಸಿಕೊಂಡರು.


ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು - ನೀನು ಬಂದು ನಮಗೆ ಅರಸನಾಗು ಅಂದವು.


ಅವನು ಅವರಿಗೆ - ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ, ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು